ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ

Update: 2022-01-27 14:54 GMT

ಉಡುಪಿ, ಜ.27: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಫೆಬ್ರವರಿ 8 ಮತ್ತು 9ರಂದು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಫೆಬ್ರವರಿ 8ರಂದು ಬೆಳಗ್ಗೆ 9 ಗಂಟೆಗೆ ಕ್ರೀಡಾಕೂಟ ಪ್ರಾರಂಭವಾಗಲಿದ್ದು, ಎರಡು ಡೋಸ್ ಕೋವಿಡ್ ಲಸಿಕೆ ಪಡೆದ ಸರಕಾರಿ ನೌಕರರು ತಮ್ಮ ವಯಸ್ಸಿನ ದೃಢೀಕರಣ ದಾಖಲಾತಿ ಹಾಗೂ ಕೋವಿಡ್ ಲಸಿಕೆ ಪಡೆದ ಕುರಿತ ದಾಖಲಾತಿ ಯನ್ನು ಹಾಜರುಪಡಿಸಿ ಕ್ರೀಡಾಕೂಟದಲ್ಲಿ ಭಾಗವಹಿಸಬಹುದಾಗಿದೆ.

ನೌಕರರಿಗೆ ಅಥ್ಲೆಟಿಕ್ಸ್, ಗುಂಪು ಸ್ಪರ್ಧೆ, ಸಾಂಸ್ಕೃತಿಕ ಹಾಗೂ ಇತರೆ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಒಂದು ಸ್ಪರ್ಧೆಯಲ್ಲಿ ಐದಕ್ಕಿಂತ ಕಡಿಮೆ ಸ್ಪರ್ಧಾಳುಗಳು ಭಾಗವಹಿಸಿದಲ್ಲಿ ಅಂತಹ ಸ್ಪರ್ಧೆಗೆ ರಾಜ್ಯ ಮಟ್ಟಕ್ಕೆ ನೇರವಾಗಿ ಆಯ್ಕೆ ಮಾಡಲಾಗುವುದು.

ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಗಳ ಕಚೇರಿ ಅಥವಾ ಸರಕಾರಿ ನೌಕರರ ಸಂಘವನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News