ಡಾ.ಶಶಿಕಿರನ್‌ಗೆ ‘ವೈದ್ಯವಾರಿಧಿ’ ಪ್ರಶಸ್ತಿ ಪ್ರದಾನ
Update: 2022-01-27 22:05 IST
ಉಡುಪಿ, ಜ.27: ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನ ತೀರ್ಥ ವೇದಿಕೆಯಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥರು, ಮಣಿಪಾಲ ಆಸ್ಪತ್ರೆಯಲ್ಲಿ ಕೋವಿಡ್ ಸಮಯದಲ್ಲಿ ವಿಶೇಷ ಕರ್ತವ್ಯ ನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾದ ಡಾ.ಶಶಿಕಿರಣ್ ಉಮಾಕಾಂತ್ ಅವರನ್ನು ‘ವೈದ್ಯವಾರಿಧಿ’ ಬಿರುದಿನೊಂದಿಗೆ ಫಲಕವನ್ನಿತ್ತು ವಿಶೇಷವಾಗಿ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಪರ್ಯಾಯೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರು ಉಪಸ್ಥಿತರಿದ್ದರು.
ಸಮಿತಿಯ ರಾಮಚಂದ್ರ ಉಪಾಧ್ಯಾಯರು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಗೋಪಾಲಕೃಷ್ಣ ಉಪಾಧ್ಯಾಯರು ವಂದಿಸಿದರು.