ಜೈಲಿನಲ್ಲಿ ರೌಡಿಗಳಿಗೆ ಸಕಲ ಸೌಲಭ್ಯ ಆರೋಪ: ವರದಿ ನೀಡುವಂತೆ ಸೂಚಿಸಿದ ಸರಕಾರ

Update: 2022-01-27 18:15 GMT
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿದ್ದ ಕೆಲ ರೌಡಿಗಳಿಗೆ ಪ್ರತ್ಯೇಕ ಆಹಾರ ಹಾಗೂ ಇನ್ನಿತರೆ ಸೌಲಭ್ಯ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಬೆಳಗಾವಿಯ ಕಾರಾಗೃಹ ಡಿಐಜಿ ಸೋಮಶೇಖರ್ ಗೆ ರಾಜ್ಯ ಸರಕಾರ ಸೂಚಿಸಿದೆ.

ಸೋಮಶೇಖರ್ ಅವರು ಈ ಹಿಂದೆ ಬೆಂಗಳೂರು ಕೇಂದ್ರ ಕಾರಾಗೃಹದ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು. ಈ ಅನುಭವದ ಆಧಾರದ ಮೇಲೆ ತನಿಖಾಧಿಕಾರಿಯಾಗಿ ಸೋಮಶೇಖರ್ ಅವರನ್ನು ನೇಮಿಸಿದ್ದು, ಅವರು ಖುದ್ದು ಜೈಲಿಗೆ ಭೇಟಿ ನೀಡಿ ಪ್ರಕರಣದ ತನಿಖೆ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆಯೇ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ರಂಗನಾಥ್ ಅವರು ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ಘಟನೆ ಮತ್ತು ಜೈಲಿನ ವ್ಯವಸ್ಥೆಯ ಬಗ್ಗೆ ಕಾರಾಗೃಹ ಎಡಿಜಿಪಿ ಅಲೋಕ್ ಮೋಹನ್ ಅವರು ಸಹ ಭೇಟಿ ಮಾಡಿ ವರದಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ವರದಿಯಲ್ಲಿ ಹಲವು ಅಂಶಗಳನ್ನು ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಮುಖ್ಯವಾಗಿ 2019ರಲ್ಲಿಯೇ ರೌಡಿ ಜೆಸಿಬಿ ನಾರಾಯಣ ಬಿಡುಗಡೆಯಾಗಿರುವ ಜೈಲಿನ ಡೈರಿ ದಿನಾಂಕ ಉಲ್ಲೇಖ ಬಗ್ಗೆ ವರದಿಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News