ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Update: 2022-01-27 18:30 GMT

ಬೀದರ್, ಜ.27: ಮಕ್ಕಳಾಗಲಿಲ್ಲ ಎಂದು ಪತ್ನಿಯ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಆರೋಪಿ ಪತಿಗೆ ಬೀದರ್ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

ನ್ಯಾಯಾಧೀಶ ಮಂಜುನಾಥ್ ಜಿ.ಎ., ಅವರಿದ್ದ ನ್ಯಾಯಪೀಠ, ಭಾಲ್ಕಿ ತಾಲೂಕಿನ ಡೊಣಗಾಪುರದ ಶೇಖಬಾಬಾ ಫೈಜಲ್ ಅಲಿ ಶೇಖ ಮುಲ್ಲಾವಾಲೆಗೆ ಜೀವಾವಧಿ ಶಿಕ್ಷೆ ಹಾಗೂ 6 ಸಾವಿರ ದಂಡ ವಿಧಿಸಿ ಆದೇಶಿಸಿದೆ. ದಂಡ ಪಾವತಿಸದಿದ್ದಲ್ಲಿ ಒಂದು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದ್ದಾರೆ.

2016ರ ಮಾ.25ರಂದು ಶೇಖಬಾಬಾ ಪತ್ನಿ ನಸೀಬಾಬಿಗೆ ಬೆಲ್ಟ್‍ನಿಂದ ಹೊಡೆದು ನಂತರ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಮಹಿಳೆ ಕಿರುಚಾಟದಿಂದ ನೆರೆ ಹೊರೆಯವರು ರಕ್ಷಣೆಗೆ ಬಂದಿದ್ದರು. ನೆರೆ ಮನೆಯವರು 108 ಆ್ಯಂಬುಲೆನ್ಸ್‍ಗೆ ಕರೆ ಮಾಡಿ ನಸೀಬಾಬಿಗೆ ಬಾಲ್ಕಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬ್ರಿಮ್ಸ್ ಆಸ್ಪತ್ರೆಗೆ ತಂದು ದಾಖಲಿಸಿದ್ದರು. 26ರಂದು ನಸೀಬಾಬಿ ಮೃತಪಟ್ಟಿದ್ದರು.

ಬಾಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರವಾಗಿ ಅಭಿಯೋಜಕ ಶರಣಗೌಡ ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News