ದ.ಕ. ಜಿಲ್ಲೆಯ ಶಾಶ್ವತ ಅಭಿವೃದ್ಧಿಗೆ ಯೋಜನೆ: ಸಚಿವ ಸುನೀಲ್ ಕುಮಾರ್

Update: 2022-01-28 09:16 GMT

ಮಂಗಳೂರು, ಜ.28: ಮುಂದಿನ 10 ವರ್ಷಗಳಲ್ಲಿ ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯ ಶಾಶ್ವತ ಅಭಿವೃದ್ಧಿಗೆ  ಶಾಸಕರ ಜೊತೆ ಸಮಾಲೋಚನೆ ನಡೆಸಿ ಯೋಜನೆ ರೂಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ಕರ್ನಾಟಕದಲ್ಲಿ ಹಿಂದುತ್ವ ಪರ ಸರಕಾರವಿದೆ. ಹಾಗಾಗಿ ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾನೂನು ಜಾರಿಗೆ ತಂದಿದ್ದೇವೆ. ದೇವಸ್ಥಾನಗಳನ್ನು ಸರಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಪ್ರಯತ್ನಿಸಲಾಗಿದೆ ಎಂದು ಹೇಳಿದರು.

ಗೋಹತ್ಯೆ ನಿಷೇಧ ಕಾನೂನಿನ ವಿರುದ್ಧ ಕೆಲವರು ನ್ಯಾಯಾಲಯದ ಮೂಲಕ ತಡೆಯಾಜ್ಞೆ ತಂದಿದ್ದಾರೆ. ಅದು  ತೆರವುಗೊಂಡ ಬಳಿಕ ಜಾರಿಯಾಗಲಿದೆ ಎಂದು ಸುನೀಲ್ ಕುಮಾರ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News