×
Ad

ಉಡುಪಿ ಸ್ಕಾರ್ಫ್ ವಿವಾದ: ಸಂಘಟನೆಗಳಿಂದ ಶಾಸಕರ ಭೇಟಿ

Update: 2022-01-28 19:06 IST

ಉಡುಪಿ, ಜ.28: ಉಡುಪಿ ಸರಕಾರಿ ಕಾಲೇಜಿನ ಸ್ಕಾರ್ಫ್ ವಿವಾದಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಸಹಾಯಕ ಖಾಝಿ, ಉಡುಪಿ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅಲ್‌ಹಾಜ್ ಬಿ.ಕೆ.ಅಬ್ದುರ್ರಹ್ಮಾನ್ ಮದನಿ ಮೂಳೂರು ನೇತೃತ್ವದ ನಿಯೋಗ ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರನ್ನು ಭೇಟಿ ಮನವಿ ಸಲ್ಲಿಸಿತು.

ಆಯಾಯ ಧರ್ಮದ ಸಂಸ್ಕೃತಿ ಗಳಿಗೆ ಚ್ಯುತಿ ಬಾರದಂತೆ ಶಾಂತಿಯುತವಾದ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮತ್ತು ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಆದಷ್ಟು ಶೀಘ್ರದಲ್ಲಿ ಶಾಶ್ವತ ಪರಿಹಾರ ಮಾಡಬೇಕು. ಇಂತಹ ವಿವಾದಗಳು ಮರುಗಳಿಸದಂತೆ ನಿಗಾ ವಹಿಸು ವಂತೆ ನಿಯೋಗವು ಶಾಸಕರನ್ನು ಒತ್ತಾಯಿಸಿತು.

ನಿಯೋಗದಲ್ಲಿ ಒಕ್ಕೂಟದ ಕಾರ್ಯದರ್ಶಿ ಕೆ.ಎ.ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ.ಅಬೂಬಕ್ಕರ್ ನೇಜಾರು, ಕರ್ನಾಟಕ ಮುಸ್ಲಿಂ ಜಮಾಅತ್ ಜಿಲ್ಲಾಧ್ಯಕ್ಷ ಬಿಎಸ್‌ಎಫ್ ರಫೀಕ್ ಗಂಗೊಳ್ಳಿ, ಜಿಲ್ಲಾ ವಕ್ಫ್ ಸಲಹಾ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಹಾಜಿ ಕೆ.ಪಿ.ಇಬ್ರಾಹಿಂ ಮಟಪಾಡಿ, ಮದ್ರಸ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಮುಹಮ್ಮದ್ ಮನ್ಸೂರ್ ಕೋಡಿ, ಎಸ್‌ಡಿಐ ಜಿಲ್ಲಾ ನಾಯಕ ಸುಬ್ಹಾನ್ ಅಹ್ಮದ್ ಹೊನ್ನಾಳ, ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಎಂ.ಎ.ಬಾವು ಮೂಳೂರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News