ದ.ಕ. ಜಿಲ್ಲೆ: ಕೋವಿಡ್‌ಗೆ ಮತ್ತೆ ನಾಲ್ವರು ಬಲಿ; 516 ಮಂದಿಗೆ ಕೊರೋನ ಪಾಸಿಟಿವ್

Update: 2022-01-28 14:25 GMT

ಮಂಗಳೂರು, ಜ.28: ದ.ಕ. ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್‌ಗೆ ಮತ್ತೆ ನಾಲ್ಕು ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸತತ ನಾಲ್ಕು ದಿನದಿಂದ ಜಿಲ್ಲೆಯಲ್ಲಿ ತಲಾ ನಾಲ್ಕು ಮಂದಿ ಕೋವಿಡ್‌ಗೆ ಬಲಿಯಾಗಿದ್ದು, ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,739ಕ್ಕೇರಿದೆ.

ಶುಕ್ರವಾರ 516 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅಲ್ಲದೆ 791 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News