Covid Update: ರಾಜ್ಯದಲ್ಲಿ ಶುಕ್ರವಾರ 31,198 ಕೊರೋನ ಪ್ರಕರಣ ದೃಢ, 50 ಮಂದಿ ಸಾವು

Update: 2022-01-28 17:52 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಜ.28: ರಾಜ್ಯದಲ್ಲಿ ಶುಕ್ರವಾರದಂದು 31,198 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 50 ಜನರು ಸೋಂಕಿಗೆ ಬಲಿಯಾಗಿದ್ದು, 71,092 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 37,23,694ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,804ಕ್ಕೆ ತಲುಪಿದೆ. 
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 2,88,767ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

50 ಸೋಂಕಿತರು ಬಲಿ: ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 8, ಬೀದರ್ 1, ಚಾಮರಾಜನಗರ 1, ಚಿತ್ರದುರ್ಗ 1, ದಕ್ಷಿಣಕನ್ನಡ 4, ದಾವಣಗೆರೆ 1, ಗದಗ 1, ಹಾಸನ 5, ಹಾವೇರಿ 2, ಕಲಬುರಗಿ 1, ಕೊಡಗು 1, ಕೋಲಾರ 1, ಕೊಪ್ಪಳ 1, ಮಂಡ್ಯ 1, ಮೈಸೂರು8, ರಾಮನಗರ 2, ಶಿವಮೊಗ್ಗ 3, ತುಮಕೂರು 4, ಉತ್ತರಕನ್ನಡ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಇದನ್ನೂ ಓದಿ: ಸಿ.ಎಂ.ಇಬ್ರಾಹೀಂ ನಿವಾಸಕ್ಕೆ ಭೇಟಿ ನೀಡಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದೇನು?

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 31,198 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 187, ಬಳ್ಳಾರಿ 709, ಬೆಳಗಾವಿ 725, ಬೆಂಗಳೂರು ಗ್ರಾಮಾಂತರ 558, ಬೆಂಗಳೂರು ನಗರ 15,199, ಬೀದರ್ 194, ಚಾಮರಾಜನಗರ 618, ಚಿಕ್ಕಬಳ್ಳಾಪುರ 427, ಚಿಕ್ಕಮಗಳೂರು 283, ಚಿತ್ರದುರ್ಗ 192, ದಕ್ಷಿಣಕನ್ನಡ 516, ದಾವಣಗೆರೆ 186, ಧಾರವಾಡ 1500, ಗದಗ 171, ಹಾಸನ 1037, ಹಾವೇರಿ 179, ಕಲಬುರಗಿ 406, ಕೊಡಗು 227, ಕೋಲಾರ 452, ಕೊಪ್ಪಳ 227, ಮಂಡ್ಯ 963, ಮೈಸೂರು 1877, ರಾಯಚೂರು 225, ರಾಮನಗರ 262, ಶಿವಮೊಗ್ಗ 509, ತುಮಕೂರು 1315, ಉಡುಪಿ 818, ಉತ್ತರಕನ್ನಡ 760, ವಿಜಯಪುರ 125, ಯಾದಗಿರಿ ಜಿಲ್ಲೆಯಲ್ಲಿ 207 ಪ್ರಕರಣ ಪತ್ತೆಯಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News