ಶಾಸಕ ಬಿ.ನಾಗೇಂದ್ರ ಸೇರಿ ಎಂಟು ಉದ್ಯಮಿಗಳಿಗೆ ಸಮನ್ಸ್

Update: 2022-01-28 17:24 GMT

ಬೆಂಗಳೂರು, ಜ.28: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್‌ನ ಕೂಡ್ಲಗಿ ಶಾಸಕ ಬಿ.ನಾಗೇಂದ್ರ ಸೇರಿದಂತೆ ಎಂಟು ಗಣಿ ಉದ್ಯಮಿಗಳ ವಿರುದ್ಧ ಕ್ರಿಮಿನಲ್ ದಾವೆ ಹೂಡಲು ಆದೇಶಿಸಿದ್ದು, ಎಲ್ಲರಿಗೂ ಸಮನ್ಸ್ ಜಾರಿ ಮಾಡಿದೆ. 

ಲೋಕಾಯುಕ್ತ ವಿಶೇಷ ತನಿಖಾ ದಳದ (ಸಿಟ್) ಪೊಲೀಸ್ ವರಿಷ್ಠಾಧಿಕಾರಿ ನೀಡಿರುವ ಖಾಸಗಿ ದೂರಿನ ಅನ್ವಯ ವಿಚಾರಣೆ ನಡೆಸಿರುವ 62ನೆ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತ್ ಜೆ ಅವರು  ಹಾಲಿ ಹಾಗೂ ಮಾಜಿ ಸಂಸದರು, ಶಾಸಕರ ವಿರುದ್ಧದ ಪ್ರಕರಣಗಳ ಸಂಬಂಧ ಈ ಆದೇಶ ಮಾಡಿದ್ದಾರೆ.

ಆರೋಪಿಗಳ ವಿರುದ್ಧ ತನಿಖಾಧಿಕಾರಿ ಅಥವಾ ದೂರುದಾರರು ಸಲ್ಲಿಸಿರುವ ದಾಖಲೆಗಳಲ್ಲಿ ಗಣಿ ಮತ್ತು ಖನಿಜ ಅಭಿವೃದ್ಧಿ ಮತ್ತು ನಿಯಂತ್ರಣಗಳ (ಎಂಎಂಡಿಆರ್) ಕಾಯಿದೆ 1957ರ ಸೆಕ್ಷನ್ 21 ಮತ್ತು 23 ಜೊತೆಗೆ 4(1), 4(1ಎ) ಅಡಿ ಮೇಲ್ನೋಟಕ್ಕೆ ಸಂಜ್ಞೇಯ ಪರಿಗಣನೆಗೆ (ಕಾಗ್ನಿಜೆನ್ಸ್) ತೆಗೆದುಕೊಳ್ಳುವ ಅಂಶಗಳು ಕಂಡು ಬಂದಿವೆ ಎಂದು ಪೀಠವು ಉಲ್ಲೇಖಿಸಿದೆ.

ಹಾಗಾಗಿ, ಈಗಲ್ ಟ್ರೇಡರ್ಸ್ ಮತ್ತು ಲಾಜಿಸ್ಟಿಕ್ಸ್ ಪಾಲುದಾರರಾದ ಶಾಸಕ ಬಿ.ನಾಗೇಂದ್ರ ಸೇರಿದಂತೆ ಎಂಟು ಮಂದಿ ಉದ್ಯಮಿಗಳ ವಿರುದ್ಧ ಗಣಿ ಮತ್ತು ಖನಿಜ ಅಭಿವೃದ್ಧಿ ಮತ್ತು ನಿಯಂತ್ರಣಗಳ (ಎಂಎಂಡಿಆರ್) ಕಾಯಿದೆ 1957ರ ಸೆಕ್ಷನ್ 21 ಮತ್ತು 23 ಜೊತೆಗೆ 4(1), 4(1ಎ) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News