×
Ad

ಪಾಕ್: ಚೆಕ್‌ ಪೋಸ್ಟ್ ಮೇಲೆ ಉಗ್ರರ ದಾಳಿ; ಕನಿಷ್ಟ 10 ಯೋಧರ ಸಾವು‌

Update: 2022-01-28 22:59 IST
ಸಾಂದರ್ಭಿಕ ಚಿತ್ರ

ಇಸ್ಲಾಮಾಬಾದ್, ಜ.28: ಪಾಕಿಸ್ತಾನದ ನೈಋತ್ಯ ಪ್ರಾಂತ ಬಲೂಚಿಸ್ತಾನದ ಚೆಕ್‌ಪೋಸ್ಟ್ ಮೇಲೆ ಈ ವಾರದ ಆರಂಭದಲ್ಲಿ ಭಯೋತ್ಪಾಕದರು ನಡೆಸಿದ ದಾಳಿಯಲ್ಲಿ ಕನಿಷ್ಟ 10 ಯೋಧರು ಮೃತಪಟ್ಟಿರುವುದಾಗಿ ಪಾಕಿಸ್ತಾನದ ಸೇನೆ ಹೇಳಿದೆ.

ಇರಾನ್‌ನೊಂದಿಗಿನ ಗಡಿಭಾಗದ ಸಮೀಪದ ಕೆಚ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಈ ದಾಳಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ 10 ಯೋಧರು ಮೃತಪಟ್ಟಿದ್ದಾರೆ. ಭದ್ರತಾ ಪಡೆ ನಡೆಸಿದ ಪ್ರತಿದಾಳಿಯಲ್ಲಿ ಓರ್ವ ಉಗ್ರ ಹತನಾಗಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಪಾಕ್ ಸೇನೆ ಹೇಳಿದೆ. ಗುಂಡಿನ ಚಕಮಕಿಯ ಬಳಿಕ ಈ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಶೋಧ ಕಾರ್ಯಾಚರಣೆ ಸಂದರ್ಭ 3 ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಗುಂಡಿನ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತಿಲ್ಲ ಎಂದು ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗ ಹೇಳಿಕೆ ನೀಡಿದೆ.

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತದಲ್ಲಿ ಪ್ರತ್ಯೇಕವಾದಿ ಅಭಿಯಾನ ಕಳೆದ 10 ವರ್ಷಗಳಿಂದ ತೀವ್ರಗೊಂಡಿದ್ದು ಪಾಕ್ ಸೇನೆಯನ್ನು ಗುರಿಯಾಗಿಸಿ ಹಲವು ದಾಳಿಗಳು ನಡೆದಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News