×
Ad

ಹುಟ್ಟುಹಬ್ಬದಂದು 11 ಹಸುಗಳನ್ನು ದತ್ತು ಪಡೆದ ಸಿಎಂ ಬಸವರಾಜ ಬೊಮ್ಮಾಯಿ

Update: 2022-01-29 08:08 IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ 62ನೇ ವರ್ಷಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ರಾಷ್ಟ್ರೋತ್ಥಾನ ಗೋಶಾಲೆಯಿಂದ 11 ಹಸುಗಳನ್ನು ದತ್ತು ಪಡೆದಿದ್ದಾರೆ.

ಶುಕ್ರವಾರ ಪತ್ನಿ ಚೆನ್ನಮ್ಮ ಜತೆ ಬೊಮ್ಮಾಯಿ ಗೋಪೂಜೆ ನೆರವೇರಿಸಿದರು. ಬಳಿಕ ಹಸು ಮತ್ತು ಕರುವನ್ನು ತಮ್ಮ ಮನೆಯೊಳಗೆ ತಂದು, ಗೋಗ್ರಾಸ ನೀಡಿದರು.

ಬಾಲಬ್ರೂಯಿ ಅತಿಥಿಗೃಹದ ಬಳಿಕ ಮಾರುತಿ ದೇವಸ್ಥಾನಕ್ಕೂ ಭೇಟಿ ನೀಡಿದ ಸಿಎಂ, ರಾಜ್ಯದ ಜನತೆಯ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಸಿಎಂ ಕಚೇರಿಯ ಪ್ರಕಟಣೆ ಹೇಳಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಉತ್ತರ ಪ್ರದೇಶದ ಸಿಎಂ ಆದಿತ್ಯನಾಥ್, ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಜನ್ಮದಿನದ ಶುಭಾಶಯ ಕೋರಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News