3 ತಿಂಗಳು ಮೇಲ್ಪಟ್ಟ ಗರ್ಭಿಣಿಯರನ್ನು ಕೆಲಸಕ್ಕೆ ಸೇರದಂತೆ ತಡೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಮಹಿಳಾ ಆಯೋಗ ನೋಟಿಸ್

Update: 2022-01-29 05:45 GMT

ಹೊಸದಿಲ್ಲಿ: ಮೂರು ತಿಂಗಳ ಮೇಲ್ಪಟ್ಟ ಗರ್ಭಿಣಿಯರನ್ನು ಕೆಲಸಕ್ಕೆ ಸೇರದಂತೆ ತಡೆದಿದ್ದಕ್ಕಾಗಿ ದಿಲ್ಲಿ ಮಹಿಳಾ ಆಯೋಗವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ನೋಟಿಸ್ ಜಾರಿ ಮಾಡಿದೆ ಎಂದು NDTV ವರದಿ  ಮಾಡಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಎಸ್‌ಬಿಐ 3 ತಿಂಗಳು ಮೇಲ್ಪಟ್ಟ ಗರ್ಭಿಣಿ ಮಹಿಳೆಯರನ್ನು 'ತಾತ್ಕಾಲಿಕವಾಗಿ ಯೋಗ್ಯರಲ್ಲ'ಎಂದು ಕರೆದಿದೆ ಎಂದು ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಟ್ವೀಟ್ ಮಾಡಿದ್ದಾರೆ.

ಬ್ಯಾಂಕಿನ ಈ ಕ್ರಮವು ತಾರತಮ್ಯ ಮತ್ತು ಕಾನೂನುಬಾಹಿರವಾಗಿದೆ.  ಏಕೆಂದರೆ ಇದು ಕಾನೂನಿನ ಅಡಿಯಲ್ಲಿ ಒದಗಿಸಲಾದ ಹೆರಿಗೆ ಪ್ರಯೋಜನಗಳ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಹೇಳಿದರು.

"ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 3 ತಿಂಗಳ ಮೇಲ್ಪಟ್ಟ ಗರ್ಭಿಣಿಯರನ್ನು ಸೇವೆಗೆ ಸೇರದಂತೆ ತಡೆಯುವ ಮಾರ್ಗಸೂಚಿಗಳನ್ನು ಹೊರಡಿಸಿದೆ ಹಾಗೂ  ಅವರನ್ನು 'ತಾತ್ಕಾಲಿಕವಾಗಿ ಕೆಲಸಕ್ಕೆ ಅನರ್ಹರು' ಎಂದು ಕರೆದಿದೆ. ಇದು ತಾರತಮ್ಯ ಮತ್ತು ಕಾನೂನುಬಾಹಿರವಾಗಿದೆ. ಇಂತಹ ಮಹಿಳಾ ವಿರೋಧಿ ನಿಯಮವನ್ನು ಹಿಂಪಡೆಯುವಂತೆ ನಾವು ಅವರಿಗೆ ನೋಟಿಸ್ ನೀಡಿದ್ದೇವೆ’’ ಎಂದು ಮಲಿವಾಲ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News