×
Ad

ಮಂಡ್ಯ: ಪತಿಯಿಂದಲೇ ವಿಚ್ಛೇದಿತ ಪತ್ನಿಯ ಹತ್ಯೆ; ಪ್ರಕರಣ ದಾಖಲು

Update: 2022-01-29 19:36 IST
ಶಾಲಿನಿ                                        ಸುರೇಶ್

ಮಂಡ್ಯ, ಜ.29: ವಿಚ್ಛೇದನ ಪಡೆದು ಎರಡು ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ವಿಚ್ಛೇದಿನ ಪತ್ನಿ ಶಾಲಿನಿ(32) ಕೊಲೆಯಾದ ಮಹಿಳೆಯಾಗಿದ್ದು, ಅದೇ ಗ್ರಾಮದ ಪತಿ ಸುರೇಶ್ ಕೊಲೆ ಮಾಡಿದ್ದ ಪತಿಯಾಗಿದ್ದಾನೆ. ಈತನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

14 ವರ್ಷದ ಹಿಂದೆ ಶಾಲಿನಿ-ಸುರೇಶ್ ಪ್ರೀತಿಸಿ ಮದುವೆಯಾಗಿದ್ದು, ಇಬ್ಬರು ಹೆಣ್ಣುಮಕ್ಕಳಿವೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 4 ವರ್ಷದ ಹಿಂದೆ ಪತಿಯಿಂದ ವಿಚ್ಛೇದನ ಪಡೆದ ಶಾಲಿನಿ ಎರಡು ಮಕ್ಕಳ ಜತೆ ತವರು ಮನೆಯಲ್ಲಿ ವಾಸವಿದ್ದಳು. ಈಕೆ ಗ್ರಾಮಕ್ಕೆ ಸಮೀಪದ ಕಾಳೇನಹಳ್ಳಿ ಬಳಿಯ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ.

ಶುಕ್ರವಾರ ಸಂಜೆ ಶಾಲಿನಿ ಕಾರ್ಖಾನೆಯಿಂದ ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಸುರೇಶ್ ಆಕೆಯ ಮೇಲೆ ಹಲ್ಲೆ ನಡೆಸಿ ಕತ್ತುಕೊಯ್ದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಶಾಲಿನಿ ಸೋದರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಶನಿವಾರ ಸುರೇಶ್‍ನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

 “ಕಳೆದ ಸಂಕ್ರಾಂತಿ ಹಬ್ಬದಂದು ಮಕ್ಕಳನ್ನು ನನ್ನ ಮನೆಗೆ ಕಳುಹಿಸಲಿಲ್ಲ. ಹಾಗಾಗಿ ಕೊಲೆ ಮಾಡಿದ್ದೇನೆ ಎಂದು ಆರೋಪಿ ಸುರೇಶ್ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಈ ಹಿಂದೆ ಹಲವು ಬಾರಿ ಶಾಲಿನಿಗೆ ಬೆದರಿಕೆ ಹಾಕಿದ್ದ ಎಂಬ ಬಗ್ಗೆ ದೂರುಗಳು ಇವೆ. ಈ ಬಗ್ಗೆ ತನಿಖೆ ಮುಂದುವರಿಯುತ್ತಿದೆ.”

ಎನ್.ಯತೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಂಡ್ಯ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News