×
Ad

ಹಿಜಾಬ್ ವಿವಾದ: ಶಾಸಕರಿಂದ ರಾಜಕೀಯ ಲಾಭದ ಪ್ರಯತ್ನ; ಎಸ್‌ಡಿಪಿಐ

Update: 2022-01-29 20:33 IST

ಉಡುಪಿ, ಜ.29: ವಿದ್ಯಾರ್ಥಿನಿಯರು ತಮ್ಮ ಸಾಂವಿಧಾನಿಕ ಹಕ್ಕಾದ ಹಿಜಾಬ್ಗಾಗಿ ಹೋರಾಟವನ್ನು ನಡೆಸುತ್ತಿರುವಾಗ ಹಿಜಾಬ್ ವಿಷಯವನ್ನು ವಿವಾದ ಮಾಡಿ ಆ ಮೂಲಕ ಸಮಾಜದ ಸೌಹಾರ್ದತೆಯನ್ನು ಕೆಡಿಸಿ, ಕೋಮು ಧ್ರವೀಕರಣಗೊಳಿಸಿ ರಾಜಕೀಯ ಲಾಭ ಪಡೆಯುವ ಪ್ರಯತ್ನವನ್ನು ಬಿಜೆಪಿ ಶಾಸಕ ರಘುಪತಿ ಭಟ್ ಮಾಡುತ್ತಿದ್ದಾರೆ ಎಂದು ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಆರೋಪಿಸಿದ್ದಾರೆ.

ಕಾಲೇಜು ಅಭಿವೃದ್ಧಿ ಮಂಡಳಿಯ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಕೋಮು ಸಾಮರಸ್ಯವನ್ನು ಕೆಡಿಸಿ ಆ ಮೂಲಕ ತಮ್ಮ ರಾಜಕೀಯ ಅಸ್ತಿತ್ವವನ್ನು ಗಟ್ಟಿಗೊಳಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಇಂತಹ ಕೋಮುವಾದಿ ಮನಸ್ಥಿತಿಯ ಜನರು ಸರಕಾರಿ ಕಾಲೇಜಿನ ಅಭಿವೃದ್ಧಿ ಮಂಡಳಿಯಲ್ಲಿ ಇರುವ ಕಾರಣ ವಿದ್ಯಾರ್ಥಿನಿಯರು ತಮ್ಮ ಸಾಂವಿಧಾನಿಕ ಹಕ್ಕಿನಿಂದ ವಂಚಿಸಲ್ಪಡುತ್ತಿದ್ದಾರೆ. ಕಳೆದ 10-12 ವರ್ಷಗಳಿಂದ ಬಿಜೆಪಿ ಮತ್ತು ಸಂಘ ಪರಿವಾರ ಮುಸ್ಲಿಮರನ್ನು ಶಿಕ್ಷಣದಿಂದ ವಂಚಿತಾಗುತರನ್ನಾಗಿಸಲು ಮತ್ತು ತನ್ನ ಹಿಂದುತ್ವ ಅಜೆಂಡಾದ ಭಾಗವಾಗಿ ಕರಾವಳಿಯ ಕೆಲವು ಕಾಲೇಜುಗಳಲ್ಲಿ ಹಿಜಾಬ್ ಅನ್ನು ಸಮಸ್ಯೆಯಾಗಿ ಬಿಂಬಿಸುತ್ತಿದೆ ಎಂದು ಅವರು ಟೀಕಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News