ಜಮ್ಮುಕಾಶ್ಮೀರದಲ್ಲಿ ಶಂಕಿತ ಉಗ್ರರಿಂದ ಗುಂಡಿನ ದಾಳಿ: ಪೊಲೀಸ್ ಕಾನ್‌ಸ್ಟೇಬಲ್ ಅಲಿ ಮುಹಮ್ಮದ್ ಮೃತ್ಯು
Update: 2022-01-29 21:59 IST
ಶ್ರೀನಗರ, ಜ. 29: ಜಮ್ಮು ಹಾಗೂ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಶಂಕಿತ ಉಗ್ರರು ಶನಿವಾರ ಪೊಲೀಸ್ ಕಾನ್ಸ್ಟೆಬಲ್ ಓರ್ವರನ್ನು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ. ಮೃತ ಪಟ್ಟ ಪೊಲೀಸ್ ಕಾನ್ಸ್ಟೆಬಲ್ ನನ್ನು ಅಲಿ ಮುಹಮ್ಮದ್ ಎಂದು ಗುರುತಿಸಲಾಗಿದೆ. ಅನಂತ್ನಾಗ್ ಜಿಲ್ಲೆಯ ಬ್ರಿಜ್ಬೆಹರಾ ಪ್ರದೇಶದ ಹಸನ್ಪೋರಾದಲ್ಲಿರುವ ಅಲಿ ಮುಹಮ್ಮದ್ ಅವರ ನಿವಾಸದ ಸಮೀಪ ಸಂಜೆ 5 ಗಂಟೆಗೆ ಅವರ ಮೇಲೆ ಶಂಕಿತ ಉಗ್ರರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಚಿಂತಾಜನಕ ಸ್ಥಿತಿಯಲ್ಲಿದ್ದ ಅಲಿ ಮುಹಮ್ಮದ್ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಯಿತು. ಆದರೆ, ಅವರು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಹಸನ್ಪೋರಾ ಪ್ರದೇಶವನ್ನು ಸುತ್ತುವರಿಯಲಾಗಿದೆ ಹಾಗೂ ಶಂಕಿತ ಉಗ್ರರನ್ನು ಬಂಧಿಸಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.