ಅಂಬೇಡ್ಕರ್ ಭಾವಚಿತ್ರ ತೆರವು: ನ್ಯಾಯಾಧೀಶರ ವಿರುದ್ಧ ಪ್ರಕರಣ ದಾಖಲಿಸಲು ಡಿಜಿ, ಐಜಿಪಿಗೆ ಕಾಂಗ್ರೆಸ್ ಪ್ರಚಾರ ಸಮಿತಿ ಮನ

Update: 2022-01-29 18:49 GMT

ಬೆಂಗಳೂರು, ಜ.29: ಗಣರಾಜ್ಯೋತ್ಸವದ ದಿನದಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆಸಿ ಅಪಮಾನಗೊಳಿಸಿದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ವೈ.ಪುಟ್ಟರಾಜು ನೇತೃತ್ವದ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್ ಅವರಿಗೆ ಮನವಿ ಮಾಡಿದೆ.  

ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನದಿಂದ ಇಂದು ನಾವು ಸ್ವತಂತ್ರವಾಗಿ ನಮ್ಮ ಹಕ್ಕನ್ನು ನಾವು ಚಲಾಯಿಸುತ್ತಿದ್ದೆವೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಮಾನತೆಯಿಂದ ಬದುಕಲು ಕಾನೂನನ್ನು ರೂಪಿಸಿ ಶಕ್ತಿ ತುಂಬಿದ ಮಹಾನ್ ವ್ಯಕ್ತಿಯ ಭಾವಚಿತ್ರವನ್ನು ನ್ಯಾಯಾಧೀಶರೊಬ್ಬರು, ತೆಗೆಸಿರುವುದು ಭಾರತದ ಪ್ರತಿಯೊಬ್ಬ ಪ್ರಜೆಗೂ ಮಾಡಿದ ಅಪಮಾನವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ. 

ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಕುರಿತ ಮಾಹಿತಿ ಪಡೆದು ಕಾರ್ಯನಿರ್ವಹಿಸುವ ಅರ್ಹತೆಯನ್ನು ಮಲ್ಲಿಕಾರ್ಜುನಗೌಡ ಅವರು ಹೊಂದಿಲ್ಲ ಎಂಬುದು ಅವರ ನಡವಳಿಕೆಯಿಂದ ಗೋತ್ತಾಗುತ್ತದೆ. ಈ ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕೆಂದು ನಿಯೋಗ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News