×
Ad

ಹುತಾತ್ಮರ ದಿನಾಚರಣೆ: ಗಾಂಧೀಜಿಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ

Update: 2022-01-30 12:35 IST

ಬೆಂಗಳೂರು, ಜ. 30: ಹುತಾತ್ಮರ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸದರು.

ವಿಧಾನಸೌಧ ಮತ್ತು ವಿಕಾಸಸೌಧ ಮಧ್ಯೆದಲ್ಲಿರು ಗಾಂಧಿ ಪ್ರತಿಮೆ ಬಳಿ ಇರಿಸಿದ್ದ ಗಾಂಧಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪಾನಮನ ಸಲ್ಲಿಸಿ, ಹುತಾತ್ಮರ ಸ್ಮರಣಾರ್ಥ 2 ನಿಮಿಷಗಳ ಮೌನಾಚಾರಣೆ ಮಾಡಿದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಂದಾಯ ಸಚುವ ಆರ್.ಅಶೋಕ, ಶಾಸಕ ರಾಜ್ ಕುಮಾರ್ ತೇಲ್ಕೂರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News