ನರಗುಂದ ಗಲಭೆ ಪ್ರಕರಣ‌: ಇನ್ ಸ್ಪೆಕ್ಟರ್ ನಂದೀಶ್ವರ ಕುಂಬಾರ ಅಮಾನತು

Update: 2022-01-30 09:42 GMT
ಇನ್ ಸ್ಪೆಕ್ಟರ್ ನಂದೀಶ್ವರ ಕುಂಬಾರ

ಗದಗ: ಇತ್ತೀಚಗೆ  ನರಗುಂದ ಪಟ್ಟಣದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಆರೋಪ ಹಿನ್ನೆಲೆ ಇನ್ ಸ್ಪೆಕ್ಟರ್ ನಂದೀಶ್ವರ ಕುಂಬಾರ ಅಮಾನತು ಮಾಡಿ ಬೆಳಗಾವಿ ಉತ್ತರ ವಲಯ ಐಜಿಪಿ ಎನ್. ಸತೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. 

ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ನಡೆದಿದ್ದ ಎರಡು ಗುಂಪುಗಳ ಮಧ್ಯೆ ಗಲಾಟೆ, ಚಾಕು ಇರಿತ ಪ್ರಕರಣದಲ್ಲಿ ಪೊಲೀಸ್ ವೈಫಲ್ಯದ  ಬಗ್ಗೆ ಆರೋಪ ಕೇಳಿ ಬಂದಿತ್ತು. 

ಜನವರಿ 17ರಂದು ಶಮೀರ್ ಶಹಪುರ ಎಂಬ ಯುವಕನ ಹತ್ಯೆಯಾಗಿದ್ದು,  ಶಮ್ ಶೀರ್ ಖಾನ್ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿತ್ತು. ಈ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನು ಗಲಭೆ ಮಾತ್ರವಲ್ಲದೆ ಯುವಕನ ಹತ್ಯೆ ಪ್ರಕರಣದಲ್ಲೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದು, ಇಡೀ ಪ್ರಕರಣವನ್ನು ಸರಿಯಾಗಿ ನಿಭಾಯಿಸುವಲ್ಲಿ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದಲ್ಲಿ  ಸಿಪಿಐ ನಂದೀಶ್ವರ ಕುಂಬಾರ್ ಅವರನ್ನ ಅಮಾನತು ಮಾಡಿ ಐಜಿಪಿ ಸತೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಎಸ್ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News