×
Ad

ದ.ಕ. ಜಿಲ್ಲಾಡಳಿತ ವತಿಯಿಂದ ಗಾಂಧೀಜಿ ಪುಣ್ಯಸ್ಮರಣೆ

Update: 2022-01-30 15:13 IST

ಮಂಗಳೂರು : ದ.ಕ. ಜಿಲ್ಲಾಡಳಿತ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರವಿವಾರ ಹುತಾತ್ಮರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.

ಇದೇ ಸಂದರ್ಭದಲ್ಲಿ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಚುನಾವಣಾ ತಹಶೀಲ್ದಾರ್ ದಯಾನಂದ್,  ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಗಾಯತ್ರಿ ನಾಯಕ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News