ರಾಜ್ಯದಲ್ಲಿ ನರ್ಸಿಂಗ್ ಸಿಬ್ಬಂದಿಗಳ ಕೊರತೆ: ಸಚಿವ ಮಾಧುಸ್ವಾಮಿ

Update: 2022-01-30 12:31 GMT

ಉಡುಪಿ, ಜ.30: ರಾಜ್ಯದಲ್ಲಿ ನರ್ಸಿಂಗ್ ಸಿಬ್ಬಂದಿಗಳ ಕೊರತೆ ಬಹಳಷ್ಟು ಇದೆ. ಕೊರೋನಾ ಸಂದರ್ಭದಲ್ಲಿ ಸಿಬ್ಬಂದಿಗಳ ಕೊರತೆ ಉಂಟಾದ ಪರಿಣಾಮ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ನೌಕರರನ್ನು ಬಳಸಿಕೊಳ್ಳುವ ಪರಿಸ್ಥಿತಿ ಎದುರಾಗಿತ್ತು ಎಂದು ರಾಜ್ಯದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಉಡುಪಿ ಆದರ್ಶ ಆಸ್ಪತ್ರೆಯ ಅಂಗ ಸಂಸ್ಥೆಯಾಗಿ ಅಲೆವೂರು ಗ್ರಾಪಂ ವ್ಯಾಪ್ತಿಯ ರಾಮಪುರ ಬಳಿ ನಿರ್ಮಾಣಗೊಂಡ ಆದರ್ಶ ಕಾಲೇಜ್ ಆಫ್ ನರ್ಸಿಂಗ್ ಮತ್ತು ಆದರ್ಶ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ ಇದರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ರವಿವಾರ ಮಾತನಾಡುತಿದ್ದರು. ನರ್ಸಿಂಗ್ ಸಿಬ್ಬಂದಿಗಳು ಮಾಡುವ ರೋಗಿಗಳ ಸೇವೆ ನಿಜವಾದ ದೇವರ ಸೇವೆಯಾಗಿದೆ. ನಮ್ಮ ಸಿಬ್ಬಂದಿಗಳು ಅದೇ ಬದ್ಧತೆಯೊಂದಿಗೆ ರೋಗಿಗಳ ಶುಶ್ರೂಷೆಯನ್ನು ಮಾಡುತ್ತಿದ್ದಾರೆ ಎಂದ ಅವರು, ನರ್ಸಿಂಗ್ ಕಾಲೇಜುಗಳು ಉತ್ತಮ ಗುಣಮಟ್ಟದ ತರಬೇತಿಯೊಂದಿಗೆ ನರ್ಸಿಂಗ್ ಸಿಬ್ಬಂದಿಗಳನ್ನು ಸಿದ್ಧಪಡಿ ಸುವ ಕಾರ್ಯ ಅಗತ್ಯವಾಗಿ ಮಾಡಬೇಕು ಎಂದರು.

ಕಾಲೇಜನ್ನು ಉದ್ಘಾಟಿಸಿದ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಮಾತನಾಡಿ, ನಮ್ಮ ದುಡಿಮೆಯಲ್ಲಿ ಶೇ.80ರಷ್ಟು ಸಮಾಜಕ್ಕೆ ನೀಡಿದರೆ ಈ ದೇಶದಲ್ಲಿ ಬಡತನ ಸಮಸ್ಯೆ ಇರುತ್ತಿರಲಿಲ್ಲ. ಇಂತಹ ಚಿಂತನೆ ಗಳನ್ನು ಪಠ್ಯಪುಸ್ತಕಗಳಲ್ಲಿ ಆಳವಡಿಸಿಕೊಳ್ಳುವ ಮೂಲಕ ಮಕ್ಕಳಿಗೆ ಇಂತಹ ಮನೋಭಾವವನ್ನು ಬೆಳೆಸಬೇಕು ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ವಹಿಸಿದ್ದರು. ಸಚಿವ ಸುನೀಲ್ ಕುಮಾರ್, ಕೊಪ್ಪ ಗೌರಿಗದ್ದೆಯ ಶ್ರೀವಿನಯ ಗುರೂಜಿ, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಹಿಂದು ಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಎ.ಜಿ.ಅಸೋಸಿಯೇಟ್ಸ್‌ನ ಸ್ಟ್ರಕ್ಚರಲ್ ಇಂಜಿ ನಿಯರ್ ಎಂ.ಗೋಪಾಲ ಭಟ್, ಅಲೆವೂರು ಗ್ರಾಪಂ ಅಧ್ಯಕ್ಷೆ ಪುಷ್ಪಾ ಕಾಂಚನ್, ಡಾ.ಸಿ.ವಿ.ಯೋಗರಾಜೇಂದ್ರ ಗೌಡ ಉಪಸ್ಥಿತರಿದ್ದರು.

ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅನುಶ್ರೀ ಕಾರ್ುಕ್ರಮ ನಿರೂ ಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News