×
Ad

ಮಣಿಪುರ: ಚುನಾವಣಾ ಅಭ್ಯರ್ಥಿಗಳನ್ನು ಪ್ರಕಟಿಸಿದ ಬೆನ್ನಿಗೆ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

Update: 2022-01-30 18:16 IST
Photo: ndtv.com

ಇಂಫಾಲ: ಮುಂದಿನ ತಿಂಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಹೆಸರಿಸಿದ ಬೆನ್ನಿಗೇ  ಪ್ರತಿಭಟನೆಗಳು ಭುಗಿಲೆದ್ದಿದ್ದು, ಅನೇಕರು ಅಸಮಾಧಾನಗೊಂಡಿದ್ದಾರೆ. ಬಿಜೆಪಿ ಬೆಂಬಲಿಗರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಣಿಪುರ ಮುಖ್ಯಮಂತ್ರಿ ಎನ್.  ಬಿರೇನ್ ಸಿಂಗ್ ಅವರ ಪ್ರತಿಕೃತಿಗಳನ್ನು ದಹಿಸಿದರು ಮತ್ತು ಘೋಷಣೆಗಳನ್ನು ಕೂಗಿದರು ಎಂದು NDTV ವರದಿ ಮಾಡಿದೆ.

ರಾಜ್ಯದ ವಿವಿಧೆಡೆ ಪಕ್ಷದ ಕಚೇರಿಗಳನ್ನು ಧ್ವಂಸಗೊಳಿಸಲಾಗಿದ್ದು, ಹಲವು ಪ್ರದೇಶಗಳಲ್ಲಿ ಪ್ರತಿಭಟನಾಕಾರರು ಫಲಕಗಳನ್ನು ಹಿಡಿದು ಜಮಾಯಿಸಿದ್ದಾರೆ. ಇಂಫಾಲದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ.

ಇತರ ಸಂಘಟನೆಗಳಿಂದ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಯಾದವರು ಸೇರಿದಂತೆ ಹಲವಾರು ನಾಯಕರು ರಾಜೀನಾಮೆ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News