×
Ad

ನೀಟ್: ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ

Update: 2022-01-30 18:48 IST
Photo- Pti

ಬೆಂಗಳೂರು, ಜ. 30: `2021ರಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳ ಪ್ರವೇಶಾತಿಗೆಂದು ನಡೆಸಿದ್ದ `ನೀಟ್' ಪರೀಕ್ಷೆಯನುಸಾರ ಮೊದಲನೇ ಸುತ್ತಿನ ಸೀಟು ಹಂಚಿಕೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟವಾಗಿದ್ದು, ಶನಿವಾರ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ ವಿವರ ಪ್ರಕಟಿಸಲಾಗಿದ್ದು, ದೃಢೀಕರಣ ಚೀಟಿಯನ್ನು ಡೌನ್-ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯೂ ಆರಂಭವಾಗಿದೆ' ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಬಗ್ಗೆ ಪ್ರಾಧಿಕಾರವು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, `ಫೆ.4ರಂದು ಈ ಮೂರೂ ಕೋರ್ಸುಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ಪ್ರಕಟಿಸಲಾಗುವುದು. ಇದಕ್ಕೂ ಮೊದಲು ಫೆ.1ರ ಬೆಳಗ್ಗೆ 10 ಗಂಟೆಯ ವರೆಗೆ ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತು ಫೆ.1ರಿಂದ 3ರ ಬೆಳಗ್ಗೆ 10 ಗಂಟೆಯ ವರೆಗೆ ತಮ್ಮ ಐಚ್ಛಿಕ ವಿಷಯಗಳಲ್ಲಿ ಅಗತ್ಯವೆನಿಸಿದರೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ' ಎಂದು ಹೇಳಿದೆ.

ಬಳಿಕ ಚಾಯ್ಸ್-1 ಮತ್ತು ಚಾಯ್ಸ್-2 ಸ್ತರದ ವಿದ್ಯಾರ್ಥಿಗಳು ನಿಗದಿತ ಶುಲ್ಕ ತುಂಬಿ, ಪ್ರವೇಶ ದಾಖಲಾತಿಯನ್ನು ಡೌನ್-ಲೋಡ್ ಮಾಡಿಕೊಳ್ಳಲು ಫೆ.4ರ ಮಧ್ಯಾಹ್ನ 2 ಗಂಟೆಯಿಂದ ಫೆ.7ರ ಮಧ್ಯಾಹ್ನ 1 ಗಂಟೆಯ ವರೆಗೆ ಅವಕಾಶವಿರುತ್ತದೆ. ನಂತರ, ವಿದ್ಯಾರ್ಥಿಗಳು ಒಂದು ಸೆಟ್ ದೃಢೀಕೃತ ಪ್ರಮಾಣಪತ್ರಗಳೊಂದಿಗೆ ಮೂಲ ದಾಖಲೆಗಳನ್ನು ಫೆ.5ರಿಂದ 7ರ ಒಳಗೆ ಬೆಂಗಳೂರಿನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪರಿಶೀಲನೆಗೆ ಸಲ್ಲಿಸಬೇಕು ಎಂದು ಪ್ರಕಟಣೆ ವಿವರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News