ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ ಸ್ಮರಣೆ
Update: 2022-01-30 19:18 IST
ಪುತ್ತೂರು: ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಕಾಂಗ್ರೆಸ್ ಎಸ್ ಟಿ ಘಟಕದ ವತಿಯಿಂದ ಮಹಾತ್ಮಗಾಂಧಿ ಅವರ 74 ನೇ ಪುಣ್ಯಸ್ಮರಣೆ ಆಚರಣೆಯನ್ನು ರವಿವಾರ ಆಚರಿಸಲಾಯಿತು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರು ಗಾಂಧೀಜಿಯವರ ಬಾವಚಿತ್ರಕ್ಕೆ ಹೂ ಹಾರ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್, ನಗರ ಸಭಾ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡ್, ಪಾಣಾಜೆ ಗ್ರಾಮ ಪಂಚಾಯತ್ ಸದಸ್ಯೆ ವಿಮಲಾ ನಾಯ್ಕ್, ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕಾರ್ಯಕಾರಿ ಸದಸ್ಯ ಜೆರೋಮ್ ಕುತಿನ್ಹ ಹಾಗೂ ಬ್ಲಾಕ್ ಎಸ್ ಟಿ ಘಟಕದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.