ಚೇತರಿಕೆ ಕಾಣದ ಸಾಹಿತಿ ಡಾ.ಕಣವಿ ಆರೋಗ್ಯ
Update: 2022-01-30 19:51 IST
ಧಾರವಾಡ, ಜ. 30: ಅನಾರೋಗ್ಯಕ್ಕೆ ಒಳಗಾಗಿ ಧಾರವಾಡದ ಎಸ್‍ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ಎಸ್‍ಡಿಎಂ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಉಸಿರಾಟದ ತೊಂದರೆ ಮುಂದುವರಿದಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ. ಶಿಷ್ಟಾಚಾರದಂತೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜ.14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಚಿಕಿತ್ಸೆ ಸಂದರ್ಭದಲ್ಲಿ ಗೊತ್ತಾಗಿದೆ. ಅವರಿಗೆ ನಿರಂತರ ಚಿಕಿತ್ಸೆ ಹಾಗೂ ವೈದ್ಯಕೀಯ ಆಮ್ಲಜನಕ ನೀಡಲಾಗುತ್ತಿದೆ ಎಂದು ಗೊತ್ತಾಗಿದೆ.