×
Ad

ಚಾಮರಾಜನಗರ: ಗ್ರಾಮದಲ್ಲಿ ಉಪಟಳ ನೀಡುತ್ತಿದ್ದ ಚಿರತೆ ಬೋನಿನಲ್ಲಿ ಸೆರೆ

Update: 2022-01-31 12:16 IST

ಚಾಮರಾಜನಗರ, ಜ.31: ಚಾಮರಾಜನಗರ ತಾಲೂಕಿನ ನಂಜೇದೇವನಪುರ ಗ್ರಾಮದಲ್ಲಿ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ.

ನಂಜೇದೇವನಪುರ ಗ್ರಾಮದಲ್ಲಿ ಬಹಳ ದಿನಗಳಿಂದ ಚಿರತೆಯೊಂದು ಉಪಟಳ ನೀಡುತ್ತಿದ್ದು, ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದಿತ್ತು. ಇದರಿಂದ ಗ್ರಾಮಸ್ಥರು ಆತಂಕದಲ್ಲಿದ್ದರು.

ಗ್ರಾಮಸ್ಥರ ಸಮಸ್ಯೆಯ ಬಗ್ಗೆ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ನಂಜೇದೇವನಪುರ ಗ್ರಾಮದ ಬಳಿ ಚಿರತೆ ಸೆರೆಗೆ ಬೋನು ಇಟ್ಟಿದ್ದರು. ರವಿವಾರ ರಾತ್ರಿ ಅರಣ್ಯ ಇಲಾಖೆಯವರು ಇಟ್ಟಿರುವ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಸೆರೆ ಸಿಕ್ಕ ಚಿರತೆಯನ್ನು ಅರಣ್ಯ ಇಲಾಖೆಯವರು ಸುರಕ್ಷಿತವಾಗಿ ಬಿ.ಆರ್. ಟಿ. ಹುಲಿ ಸಂರಕ್ಷಿತ ಪ್ರದೇಶದ ಕೋರ್ ಜೋನ್ ನಲ್ಲಿ ಬಿಟ್ಟಿದ್ದಾರೆ.

ಕಳೆದ ಏಳು ತಿಂಗಳಲ್ಲಿ 9ನೇ ಚಿರತೆಯನ್ನು ಸೆರೆ ಹಿಡಿದು ಸುರಕ್ಷಿತ ಪ್ರದೇಶಕ್ಕೆ ಬಿಡಲಾಗಿದೆ ಎಂದು ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಜೆ.ಸಂತೋಷ್ ಕುಮಾರ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News