×
Ad

ಗೋವಾ ಚುನಾವಣೆ: ಪಣಜಿ ಕ್ಷೇತ್ರದಿಂದ ತನ್ನ ಅಭ್ಯರ್ಥಿ ಹಿಂಪಡೆದ ಶಿವಸೇನೆ, ಉತ್ಪಲ್ ಪಾರಿಕ್ಕರ್ ಗೆ ಬೆಂಬಲ

Update: 2022-01-31 13:11 IST
Photo: ANI

ಪಣಜಿ: ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ  ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಮನೋಹರ್ ಪಾರಿಕ್ಕರ್ ಅವರ ಪುತ್ರ ಉತ್ಪಲ್ ಪಾರಿಕ್ಕರ್ ಅವರನ್ನು ಬೆಂಬಲಿಸಲು ಶಿವಸೇನೆ ಪಣಜಿಯಿಂದ ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಂಡಿತು.

ಪಣಜಿ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಪಲ್ ಪಾರಿಕ್ಕರ್ ಗೆ  ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಪಣಜಿ ಕ್ಷೇತ್ರದಿಂದ ಮನೋಹರ್ ಪಾರಿಕ್ಕರ್ ಸುಮಾರು 25 ವರ್ಷಗಳ ಕಾಲ ಪ್ರಾಬಲ್ಯ ಸಾಧಿಸಿದ್ದರು.

ಪಣಜಿಯಿಂದ ಸ್ಪರ್ಧಿಸಲು ಉತ್ಪಲ್ ಪಾರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಅವರನ್ನು ಬೆಂಬಲಿಸಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಈ ಹಿಂದೆ ಎಲ್ಲಾ ವಿರೋಧ ಪಕ್ಷಗಳನ್ನು ಒತ್ತಾಯಿಸಿದ್ದರು.

"ನಾವು ನಮ್ಮ ಮಾತನ್ನು ಉಳಿಸಿಕೊಳ್ಳುತ್ತಿದ್ದೇವೆ. ಶಿವಸೇನೆಯು ಪಣಜಿಯಿಂದ ತನ್ನ ಅಭ್ಯರ್ಥಿ ಶೈಲೇಂದ್ರ ವೆಲಿಂಗ್ಕರ್ ಅವರನ್ನು ಹಿಂತೆಗೆದುಕೊಳ್ಳುತ್ತಿದೆ. ಅಷ್ಟೇ ಅಲ್ಲ, ನಮ್ಮ ಕಾರ್ಯಕರ್ತರು ಉತ್ಪಲ್ ಪಾರಿಕ್ಕರ್ ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ”ಎಂದು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಅವರನ್ನು ಟ್ಯಾಗ್ ಮಾಡುವ ಟ್ವೀಟ್‌ನಲ್ಲಿ ಸಂಜಯ್ ರಾವತ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News