×
Ad

ಜಿ.ಮಾದೇಗೌಡ ಕುರಿತ ಆಡಿಯೋ ವೈರಲ್: ಜೆಡಿಎಸ್ ನಿಂದ ಮಾಜಿ ಸಂಸದ ಶಿವರಾಮೇಗೌಡ ಉಚ್ಚಾಟನೆ

Update: 2022-01-31 17:10 IST
ಶಿವರಾಮೇಗೌಡ 

ಬೆಂಗಳೂರು: ಮಾಜಿ ಸಂಸದ ದಿವಂಗತ ಜಿ.ಮಾದೇಗೌಡ ಕುರಿತ ಎಲ್.ಆರ್.ಶಿವರಾಮೇಗೌಡ  ಅವರದ್ದೆನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಶಿವರಾಮೇಗೌಡ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​.ಕೆ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ. 

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಲ್. ಶಿವರಾಮೇಗೌಡ ಅವರನ್ನು  ವರಿಷ್ಠರ ಆದೇಶದ ಮೇರೆಗೆ ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ. 

ಇದನ್ನೂ ಓದಿ: ಜಿ.ಮಾದೇಗೌಡ ಕುರಿತ ಆಡಿಯೋ ವೈರಲ್: ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಆಕ್ರೋಶ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News