ದಿಲ್ಲಿ: ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸದ ಬಳಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
Update: 2022-01-31 20:00 IST
ಹೊಸದಿಲ್ಲಿ,ಜ.31: ನೂರಾರು ಅಂಗನವಾಡಿ ಕಾರ್ಯಕರ್ತೆಯರು ಸೋಮವಾರ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಿ ಸರಕಾರಿ ನೌಕರರ ಸ್ಥಾನಮಾನ ಸೇರಿದಂತೆ ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ದಿಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಒಕ್ಕೂಟದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಸರಕಾರ ವಿರೋಧಿ ಘೋಷಣೆಗಳನ್ನು ಕೂಗಿದರಲ್ಲದೆ,ನೂತನ ಶಿಕ್ಷಣ ನೀತಿಯನ್ನು ಹಿಂದೆಗೆದುಕೊಳ್ಳುವಂತೆ ಆಗ್ರಹಿಸಿ ಭಿತ್ತಿಪತ್ರಗಳನ್ನೂ ಪ್ರದರ್ಶಿಸಿದರು.
ಮುಖ್ಯಮಂತ್ರಿ ನಿವಾಸದಿಂದ ಕೆಲವು ಮೀಟರ್‌ಗಳ ದೂರದಲ್ಲಿ ಪೊಲೀಸರು ಅವರನ್ನು ತಡೆದಿದ್ದು,ಅಲ್ಲಿಯೇ ಧರಣಿ ಪ್ರತಿಭಟನೆಯನ್ನು ಮುಂದುವರಿಸಿದರು.