ಅಂಗನವಾಡಿ ಕಾರ್ಯಕರ್ತೆ ಹುದ್ದೆ: ಆಕ್ಷೇಪಣೆ ಆಹ್ವಾನ
Update: 2022-01-31 21:52 IST
ಉಡುಪಿ, ಜ.31:ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 5 ಅಂಗನವಾಡಿ ಕಾರ್ಯಕರ್ತೆ ಮತ್ತು 8 ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದೆ. ಈ ಸಂಬಂಧ ಆಕ್ಷೇಪಣೆ ಇದ್ದಲ್ಲಿ ಫೆಬ್ರವರಿ 4ರೊಳಗೆ ಮೇಲಿನ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.