ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿಗೆ ಡಾ. ಜೋಸೆಫ್ ವಿ.ಜಿ. ಆಯ್ಕೆ
Update: 2022-01-31 22:49 IST
ಬೆಂಗಳೂರು, ಜ.31: ಕನ್ನಡ ಸಾಹಿತ್ಯ ಪರಿಷತ್ ನೀಡುವ 2022ನೆಯ ಸಾಲಿನ “ಶ್ರೀ ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ”ಗೆ ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಕುಲಪತಿ ಡಾ. ಜೋಸೆಫ್ ವಿ.ಜಿ. ಆಯ್ಕೆಯಾಗಿದ್ದಾರೆ. ಪ್ರಶಸ್ತಿಯ ಮೊತ್ತ ರೂ. 25 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.
ಪರಿಷತ್‍ನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಆಯ್ಕೆ ಸಮಿತಿಯ ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪ್ರಕಾಶಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗಶೆಟ್ಟಿ, ಗೌರವ ಕೋಶಾಧ್ಯಕ್ಷ ಪಟೇಲ್‍ಪಾಂಡು ಉಪಸ್ಥಿತರಿದ್ದರು.