×
Ad

ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ತರಬೇತಿ, ಪ್ರಮಾಣ ಪತ್ರಕ್ಕಾಗಿ ಅರ್ಜಿ ಆಹ್ವಾನ

Update: 2022-01-31 22:52 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.31: ಬೃಹತ್ ಬೆಂಗಳೂರು ಮಾಹನಗರ ಪಾಲಿಕೆ ಪಶ್ಚಿಮ ವಲಯದ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಬೀದಿಬದಿಯ ವ್ಯಾಪಾರಿಗಳು ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರವು ನೀಡುವ ಆಹಾರ ಸುರಕ್ಷತೆ, ಸ್ವಚ್ಛತೆ ತರಬೇತಿ ಮತ್ತು ಪ್ರಮಾಣಪತ್ರ ಪಡೆಯಲು ಅರ್ಜಿ ಆಹ್ವಾನಿಸಿದೆ. 

ಗಾಂಧಿನಗರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಬಡಾವಣೆ, ಗೋವಿಂದರಾಜನಗರ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳು ತರಬೇತಿ ಮತ್ತು ಪ್ರಮಾಣಪತ್ರ ಪಡೆಯಲು ತಮ್ಮ ವಿವರಗಳೊಂದಿಗೆ ಪಾಲಿಕೆ ಪಶ್ಚಿಮ ವಲಯದ ಕಲ್ಯಾಣಾಧಿಕಾರಿಗಳ ಕಚೇರಿ(ಕಲ್ಯಾಣ ಶಾಖೆ) ಸಂಪಿಗೆ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು-20. ಈ ವಿಳಾಸಕ್ಕೆ ಸಂಪರ್ಕಿಸಿ ಫೆ.19ರೊಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ತಿಳಿಸಿದೆ. ಮುಂದಿನ ದಿನಗಳಲ್ಲಿ ಪ್ರಮಾಣ ಪತ್ರವಿಲ್ಲದೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಪಾಲಿಕೆ ಎಚ್ಚರಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News