ಕೇಂದ್ರ ಯೋಜನೆ ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತದೆ: ನಿರ್ಮಲಾ ಸೀತಾರಾಮನ್
Update: 2022-02-01 13:38 IST
ಹೊಸದಿಲ್ಲಿ: ಕೇಂದ್ರದ ಉತ್ಪಾದನೆ ಆಧಾರಿತ ಪ್ರೋತ್ಸಾಹ ಕ್ರಮ (ಪಿಎಲ್‌ಐ) ಯೋಜನೆಯು ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಕೇಂದ್ರ ಸರಕಾರದ 2022-23ನೇ ಸಾಲಿನ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸಂಸತ್ತಿಗೆ ಮಾಹಿತಿ ನೀಡಿದರು.
ಉತ್ಪಾದನೆ ಆಧಾರಿತ ಪ್ರೋತ್ಸಾಹ ಕ್ರಮ (ಪಿಎಲ್‌ಐ) ಯೋಜನೆಯು ಆತ್ಮನಿರ್ಭರ ಭಾರತವನ್ನು ಸಾಧಿಸಲು ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ. ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳು ಹಾಗೂ 30 ಲಕ್ಷ ಕೋಟಿ ಹೆಚ್ಚುವರಿ ಉತ್ಪಾದನೆಯನ್ನು ಸೃಷ್ಟಿಸುವ ಸಾಮರ್ಥ್ಯವಿದೆ" ಎಂದು ಅವರು ಹೇಳಿದರು.