ಬೆಂಗಳೂರಿನಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್
Update: 2022-02-01 17:23 IST
ಬೆಂಗಳೂರು, ಫೆ.1: ಇಲ್ಲಿನ ಜಯನಗರದ ಸೌತ್‍ಎಂಡ್ ಸರ್ಕಲ್ ಬಳಿ ಸುಮಾರು 30 ಪ್ರಯಾಣಿಕರಿದ್ದ ಬಿಎಂಟಿಸಿ ಬಸ್‍ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಬೆಂಕಿಯ ಜ್ವಾಲೆ ಹೆಚ್ಚಾಗುತ್ತಿದ್ದಂತೆ ಚಾಲಕ ಎಲ್ಲ ಪ್ರಯಾಣಿಕರನ್ನು ಇಳಿಸಿದ್ದಾರೆ. ಕೆಲ ಕ್ಷಣಗಳ ಬಳಿಕ ಬಸ್ ಸಂಪೂರ್ಣ ಹಾನಿಯಾಗಿದೆ.
ತದನಂತರ, ಕೂಡಲೇ ಅಗ್ನಿಶಾಮಕದಳಕ್ಕೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತಾಂತ್ರಿಕ ಕಾರಣಗಳಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಬಿಎಂಟಿಸಿಯ ತಾಂತ್ರಿಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಲ್ಲದೆ, ಇತ್ತೀಚಿಗೆ ಚಾಮರಾಜಪೇಟೆಯ ಮಕ್ಕಳ ಕೂಟ ಬಸ್ ನಿಲ್ದಾಣ ಬಳಿ ಬಿಎಂಟಿಸಿ ಬಸ್‍ನಲ್ಲಿ ಅಗ್ನಿ ಕಾಣಿಸಿಕೊಂಡಿತ್ತು. ಇದೀಗ ಅದೇರೀತಿ ಮತ್ತೊಂದು ಬಸ್‍ಗೆ ಬೆಂಕಿ ಹೊತ್ತಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ