ಸಹಾಯಧನ ಒದಗಿಸದ ಸಫಾಯಿ ಕರ್ಮಚಾರಿ ನಿಗಮದ ವಿರುದ್ಧ ಹೈಕೋರ್ಟ್ ಅಸಮಾಧಾನ
Update: 2022-02-01 18:38 IST
ಬೆಂಗಳೂರು, ಫೆ.1: ಕೋಲಾರ ಜಿಲ್ಲೆಯ ಕರ್ಮಚಾರಿಗಳಿಗೆ ಪುನರ್ವಸತಿ ಕಲ್ಪಿಸಲು ಸಹಾಯಧನ ಒದಗಿಸದ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಸಬ್ಸಿಡಿ ಹಣಕ್ಕಾಗಿ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ನಿರ್ದೇಶಿಸುವಂತೆ ಕೋರಿ ಕೋಲಾರ ಜಿಲ್ಲೆಯ 44 ಸಫಾಯಿ ಕರ್ಮಚಾರಿಗಳು ಹೈಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಅರ್ಜಿದಾರರು 2018ರಲ್ಲೇ ಅರ್ಜಿ ಸಲ್ಲಿಸಿದ್ದಾರೆ. ಆದರೂ ಸಹಾಯ ಧನ ಬಿಡುಗಡೆ ಮಾಡಿಲ್ಲ. ಹೈಕೋರ್ಟ್ ಸಹ ಸೂಚಿಸಿದ್ದರೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.