×
Ad

ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರಿಗೆ ಉಚಿತ ಬೂಸ್ಟರ್ ಡೋಸ್ ಲಸಿಕೆ

Update: 2022-02-01 20:09 IST

ಮಣಿಪಾಲ, ಫೆ.1: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸರಕಾರದ ಮಾರ್ಗಸೂಚಿಗಳ ಪ್ರಕಾರ ಅರ್ಹರಾಗಿರುವ ಹಿರಿಯ ನಾಗರಿಕರಿಗೆ ಉಚಿತವಾಗಿ ಬೂಸ್ಟರ್ ಡೋಸ್ ಕೋವಿಡ್ ಲಸಿಕೆಯನ್ನು ಕೊಡಲಾಗು ವುದು ಎಂದು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ಎರಡನೇ ಡೋಸ್ ಲಸಿಕೆ ಪಡೆದು 9 ತಿಂಗಳು ದಾಟಿದ 60ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆಯಿಂದ ಬಳಲುತ್ತಿರುವ ನಾಗರಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು. ಬೂಸ್ಟರ್ ಡೋಸ್‌ನ ಅವಶ್ಯವಿದ್ದವರು ಕೋವಿನ್ ಆ್ಯಪ್‌ನಲ್ಲಿ ನೋಂದಣಿ ಮಾಡಿ ಅಥವಾ ನೇರವಾಗಿ ಆಧಾರ್ ಕಾರ್ಡ್ ಅಥವಾ ಸರಕಾರ ನಿಗದಿಪಡಿಸಿರುವ ಯಾವುದಾದರು ದಾಖಲೆಯೊಂದಿಗೆ ಮರೇನಾ ಸ್ಪೋಟ್ಸರ್ ಕಾಂಪ್ಲೆಕ್ಸ್ ಬರುವಂತೆ ತಿಳಿಸಲಾಗಿದೆ.

ಲಸಿಕೆಯನ್ನು 3ನೇ ಶನಿವಾರ ಮತ್ತು ಆದಿತ್ಯವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಂದು ಬೆಳಗ್ಗೆ 9:30ರಿಂದ ಸಂಜೆ 3:30ರವರೆಗೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0820-2922761ಗೆ ಕರೆ ಮಾಡು ವಂತೆ ಅವರು ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News