×
Ad

ಪ್ರಾರ್ಥನಾ ಸ್ಥಳ ಮುಚ್ಚಲು ಒತ್ತಡ: ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕ್ರಮಕ್ಕೆ ಶಾಸಕ ರಿಝ್ವಾನ್ ಅರ್ಶದ್ ಆಗ್ರಹ

Update: 2022-02-01 21:05 IST

ಬೆಂಗಳೂರು, ಫೆ.1: ಬೆಂಗಳೂರು ರೈಲ್ವೆ ನಿಲ್ದಾಣದ ಪ್ಲಾಟ್‍ಫಾರ್ಮ್ ಸಂಖ್ಯೆ 6ರಲ್ಲಿರುವ ಪ್ರಾರ್ಥನಾ ಸ್ಥಳವನ್ನು ಮುಚ್ಚುವಂತೆ ಸಮಾಜ ವಿರೋಧಿ ಶಕ್ತಿಗಳು ರೈಲ್ವೆ ಅಧಿಕಾರಿಗಳನ್ನು ಬೆದರಿಸುತ್ತಿದ್ದಾರೆ. ರೈಲ್ವೆ ನಿಲ್ದಾಣದ ಆವರಣದಲ್ಲಿ ದೇವಸ್ಥಾನ, ಚರ್ಚ್ ಹಾಗೂ ನಮಾಝ್ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಾಸಕ ರಿಝ್ವಾನ್ ಅರ್ಶದ್ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎಲ್ಲ ಧರ್ಮಗಳ ಜನರು ದಶಕಗಳಿಂದ ತಮ್ಮ ಆಚರಣೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಇದೀಗ ಏಕಾಏಕಿ ಈ ಸಮಾಜ ವಿರೋಧಿ ಶಕ್ತಿಗಳಿಗೆ ಇದು ಬಾಧಿಸಿದ್ದು ಹೇಗೆ? ಇಂತಹ ಘಟನೆಗಳು ಬಿಜೆಪಿ ಸರಕಾರದಲ್ಲಿ ಹೆಚ್ಚುತ್ತಿವೆ. ಸರಕಾರದ ವೈಫಲ್ಯಗಳನ್ನು ಮುಚ್ಚಲು ಜನರ ಗಮನ ಬೇರೆಡೆಗೆ ಸೆಳೆಯುವ ಪ್ರಯತ್ನವಾಗಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ರೈಲ್ವೇ ನಿಲ್ದಾಣದಲ್ಲಿರುವ ನಮಾಝ್ ಕೊಠಡಿಗೆ ಸಂಘಪರಿವಾರದಿಂದ ದಾಳಿ

ನಮ್ಮ ರಾಜ್ಯದ ಜಾತ್ಯತೀತ ವಾತಾವರಣವನ್ನು ಹಾಳು ಮಾಡಲು ಪ್ರಯತ್ನಿಸುತ್ತಿರುವ ಈ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿರುವ ರಿಝ್ವಾನ್ ಅರ್ಶದ್, ರೈಲ್ವೆ ಅಧಿಕಾರಿಗಳು ಸರ್ವ ಧರ್ಮೀಯರ ಆಚರಣೆಗಳನ್ನು ಎಂದಿನಂತೆ ಮುಂದುವರೆಸಿಕೊಂಡು ಹೋಗಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News