×
Ad

ನಮ್ಮಲ್ಲಿ ಪ್ರಾಣಿಗಳ ಕಾನೂನು ಕಠಿಣ ಇಲ್ಲ: ಬೀದಿ ನಾಯಿ ಮೇಲೆ ಕಾರು ಹರಿಸಿದ್ದ ಪ್ರಕರಣಕ್ಕೆ ನಟಿ ರಮ್ಯಾ ಪ್ರತಿಕ್ರಿಯೆ

Update: 2022-02-01 21:42 IST

ಬೆಂಗಳೂರು, ಫೆ.1: ನಮ್ಮ ದೇಶದಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕಾನೂನುಗಳು ಜಾರಿಯಲ್ಲಿ ಇಲ್ಲ ಎಂದು ಕನ್ನಡ ಚಲನಚಿತ್ರ ನಟಿ ರಮ್ಯಾ ಹೇಳಿದ್ದಾರೆ.

ಬೀದಿ ನಾಯಿ ಮೇಲೆ ಕಾರು ಹರಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿ ಆದಿ ವಿರುದ್ಧ ರಮ್ಯಾ ಸರಣಿ ಟ್ವೀಟ್ ಮಾಡಿದ್ದರು. ಮಂಗಳವಾರ ಬೀದಿ ನಾಯಿ ಲಾರಾ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡ ರಮ್ಯಾ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. 

ಅಪಘಾತ ಆಗುತ್ತೆ. ಮನುಷ್ಯ ತಪ್ಪು ಮಾಡುತ್ತಾನೆ ಅದು ಸಹಜ. ಆದರೆ, ಈ ಘಟನೆಯನ್ನು ನಾವು ಗಮನಿಸಿದಾಗ ಆ ವ್ಯಕ್ತಿ ಬೇಕಂತಲೇ ನಾಯಿ ಮೇಲೆ ಗಾಡಿ ಹತ್ತಿಸಿದ್ದಾನೆ. ಇದನ್ನು ನೋಡಿ ಸಹಿಸಿಕೊಳ್ಳಲು ಆಗಲಿಲ್ಲ. ನಮ್ಮ ದೇಶದಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕಾನೂನುಗಳು ಇಲ್ಲದಿರುವುದರಿಂದಲೇ ಇಂತಹ ಘಟನೆಗಳು ನಡೆಯುತ್ತವೆ ಎಂದು ರಮ್ಯಾ ಹೇಳಿದರು.  

ದಯೆ ಎನ್ನುವುದು ಕೇವಲ ಮನುಷ್ಯನಿಗೆ ಅಲ್ಲ. ಪ್ರಕೃತಿಯಲ್ಲಿರುವ ಪ್ರಾಣಿಗಳಿಗೂ ಕೂಡ ಇರಬೇಕು. ದುಡ್ಡಿರೋರು ಕಾನೂನಿನಿಂದ ತಪ್ಪಿಸಿಕೊಳ್ಳುತ್ತಾರೆ. ಕಾನೂನನ್ನು ಕಠಿಣಗೊಳಿಸಬೇಕೆಂದು ಸರಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದರು. 

ಬೀದಿ ನಾಯಿ ‘ಲಾರಾ’ ಅಂತ್ಯ ಸಂಸ್ಕಾರ ಮಂಗಳವಾರ ಸುಮನಹಳ್ಳಿ ಪ್ರಾಣಿಗಳ ಸ್ಮಶಾನದಲ್ಲಿ ನಡೆಯಿತು. ಘಟನೆಯ ಬಳಿಕ ನಾಪತ್ತೆಯಾಗಿದ್ದ ಆದಿನಾರಾಯಣನನ್ನು ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. 

|

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News