×
Ad

ಬಂಡವಾಳಶಾಹಿ ಪರ ಬಜೆಟ್: ರಮೇಶ್ ಕಾಂಚನ್‌

Update: 2022-02-01 21:44 IST

ಉಡುಪಿ, ಫೆ.1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿರುವ ಬಜೆಟ್ ನಿರಾಶಾದಾಯಕ ವಾಗಿದ್ದು ಮಧ್ಯಮ ಹಾಗೂ ಬಡ ವರ್ಗದವರನ್ನು ಸಂಪೂರ್ಣ ನಿರ್ಲಕ್ಷಿಸಿ ಕೇವಲ ಬಂಡವಾಳಶಾಹಿಗಳಿಗೆ ನೆರವಾಗುವ ನಿಟ್ಟಿನಲ್ಲಿದೆ ಎಂದು ಉಡುಪಿ ನಗರಸಭೆಯ ಪ್ರತಿಪಕ್ಷ ನಾಯಕ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.

ಈ ಬಾರಿಯ ಬಜೆಟ್ ಕುರಿತು ದೇಶದ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಮಧ್ಯಮ ಹಾಗೂ ಬಡವರ್ಗದ ಜನರು ವಿಶೇಷವಾದ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ದಿನನಿತ್ಯದ ಬೆಲೆಗಳ ಏರಿಕೆ ಮಾಡಿರುವುದರೊಂದಿಗೆ ಗ್ಯಾಸ್, ಇಂಧನ ಹಾಗೂ ಪ್ರತಿಯೊಂದರಲ್ಲೂ ಕೂಡ ಶ್ರೀಮಂತ ವರ್ಗಕ್ಕೆ ನೆರವಾಗುವ ನಿಟ್ಟಿನಲ್ಲಿ ವಿತ್ತ ಸಚಿವರು ತಮ್ಮ ಬಜೆಟ್ ಮಂಡಿಸಿದ್ದಾರೆ. ಒಟ್ಟಾರೆಯಾಗಿ ಇದು ಜನಸ್ನೇಹಿ ಬಜೆಟ್ ಅಲ್ಲವೇ ಅಲ್ಲ, ಬದಲಾಗಿ ಸರ್ಕಾರ ಶ್ರೀಮಂತರ ಪರವಾಗಿದೆ ಎಂಬುದಕ್ಕೆ ಈ ಬಜೆಟ್ ಸಾಕ್ಷಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News