ಭದ್ರಾವತಿ: ಸರ್.ಎಂ.ವಿ.ಕಾಲೇಜಿನಲ್ಲಿ ಕೇಸರಿ ಶಾಲು- ಸ್ಕಾರ್ಫ್ ವಿವಾದ

Update: 2022-02-01 17:53 GMT

ಶಿವಮೊಗ್ಗ, ಫೆ.01:  ಉಡುಪಿ ಕಾಲೇಜಿನ ಹಿಜಾಬ್ ವಿವಾದದ ಬೆನ್ನಲ್ಲೇ  ಭದ್ರಾವತಿಯ ಪ್ರತಿಷ್ಠಿತ ಕಾಲೇಜಿನಲ್ಲೂ  ಹಿಜಾಬ್ ವಿವಾದ ಭುಗಿಲೆದ್ದಿದೆ. ಸಮವಸ್ತ್ರವಿದ್ದರೂ ಕೆಲವರಿಗೊಂದು, ಉಳಿದವರಿಗೊಂದು ನೀತಿ ಅನುಸರಿಸದಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು.

ಭದ್ರಾವತಿ ನ್ಯೂಸ್ ಟೌನ್‌ನ ಸರ್.ಎಂ.ವಿ.ಕಾಲೇಜಿನಲ್ಲಿ ಮಂಗಳವಾರ  ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ  ಬಂದಿದ್ದರು. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದರು. ಇದರಿಂದ ಕೆಲವು ಹೊತ್ತು ಕಾಲೇಜಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ತರಗತಿಗೆ ಕೇಸರಿ ಶಾಲು: 

ಸರ್.ಎಂ.ವಿ. ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಿದ್ದೂ, ಅನ್ಯ ಕೋಮಿನ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ತರಗತಿಗಳಲ್ಲೂ ಹಿಜಾಬ್ ಧರಿಸುತ್ತಾರೆ. ಇದು ಸರಿಯಾದ ಕ್ರಮವಲ್ಲ. ಆದ್ದರಿಂದ ತಾವು ಕೇಸರಿ ಶಾಲು ಧರಿಸಿ ತರಗತಿಗೆ ಬರುತ್ತೇವೆ ಎಂದು ಕೆಲವು ವಿದ್ಯಾರ್ಥಿಗಳು ತಿಳಿಸಿದ್ದರು.

ಮಂಗಳವಾರವ ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ, ಕಾಲೇಜಿಗೆ ಬಂದಿದ್ದರು. ಇನ್ಮುಂದೆ ಕೇಸರಿ ಶಾಲು ಧರಿಸಿಕೊಂಡೇ ತರಗತಿಗೆ ಬರುವುದಾಗಿ ಕಾಲೇಜು ಆಡಳಿತ ಮಂಡಳಿಗೆ ತಿಳಿಸಿದರು.

ಕ್ರಮ ಕೈಗೊಂಡ ಆಡಳಿತ ಮಂಡಳಿ: 

ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳ ಜೊತೆಗೆ ಕಾಲೇಜು ಆಡಳಿತ ಮಂಡಳಿ ಚರ್ಚೆ ನಡೆಸಿತು. ವಿವಿಧ ಸಂಘಟನೆಗಳ ಪ್ರಮುಖರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲಾ ವಿದ್ಯಾರ್ಥಿಗಳಿಗು ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ತರಗತಿ ಪ್ರವೇಶಿಸುವಾಗ ಸಮವಸ್ತ್ರದಲ್ಲೇ ಇರಬೇಕು ಎಂದು ಪಟ್ಟು ಹಿಡಿದರು.

ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರು ಕಾಲೇಜಿನ ವೇಯ್ಟಿಂಗ್  ರೂಮ್‌ನಲ್ಲಿ ಅದನ್ನು ತೆಗೆದು, ಸಮವಸ್ತ್ರದಲ್ಲೇ ತರಗತಿಗೆ ಬರಬೇಕು. ಗುರುವಾರದಿಂದ  ಬರಬೇಕು. ಗುರುವಾರದಿಂದ ಈ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ 

ಡಾ.ಉಮಾಶಂಕರ್, - ಸರ್.ಎಂ.ವಿ.ಕಾಲೇಜು ಪ್ರಾಂಶುಪಾಲ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News