ಫೆ.7ರಿಂದ ಆಯವ್ಯಯದ ಪೂರ್ವಭಾವಿ ಸಿದ್ಧತೆ: ಸಿಎಂ ಬೊಮ್ಮಾಯಿ

Update: 2022-02-02 06:51 GMT

ಬೆಂಗಳೂರು, ಫೆ.2: ಆಯವ್ಯಯದ ಪೂರ್ವಭಾವಿ ಸಿದ್ಧತೆಯನ್ನು ಫೆ.7ರಿಂದ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಕೇಂದ್ರ ಸರಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.

ನಾಳೆ ದಿಲ್ಲಿ ಪ್ರವಾಸ: ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ. ಅಂತಾರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಬಹುತೇಕವಾಗಿ ಗುರುವಾರ ದಿಲ್ಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News