ಬಿಹಾರ: ಗುಂಡಿನ ಚಕಮಕಿ; ಇಬ್ಬರು ಮಾವೋವಾದಿಗಳ ಸಾವು‌

Update: 2022-02-02 16:28 GMT
PHOTO : ಸಾಂದರ್ಭಿಕ ಚಿತ್ರ

 ಪಾಟ್ನಾ, ಫೆ. 2: ಬಿಹಾರದ ಲಖಿಸರಾ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ ನಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ. ಚನ್ನಾ ಪೊಲೀಸ್ ಠಾಣಾ ಪ್ರದೇಶದ ಲತಿಯಾ ಅರಣ್ಯ ಪ್ರದೇಶದಲ್ಲಿ ಎನ್ಕೌಂಟರ್ ಮುಂದುವರಿದಿದೆ. ಎನ್ಕೌಂಟರ್ ನಲ್ಲಿ  ಮೃತಪಟ್ಟ ಇಬ್ಬರು ಮಾವೋವಾದಿಗಳ ಮೃತದೇಹಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಘಟನೆಯಲ್ಲಿ ಇತರ ಕೆಲವು ಮಾವೋವಾದಿಗಳು ಗಾಯಗೊಂಡಿದ್ದಾರೆ. ಆದರೆ, ಅವರು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮುಂಗೇರ್ ರೇಂಜ್ ನ  ಡಿಐಜಿ ಸಂಜಯ್ ಅವರು ತಿಳಿಸಿದ್ದಾರೆ.

ಎನ್ಕೌಂಟರ್ ನಡೆದ ಸ್ಥಳದಲ್ಲಿ ಲಖಿಸರಾ ಪೊಲೀಸ್ ಅಧೀಕ್ಷಕರು ಕ್ಯಾಂಪ್ ಮಾಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿ ಗಾಯಗೊಡ ಬಗ್ಗೆ ವರದಿಯಾಗಿಲ್ಲ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲು ಜಿಲ್ಲಾ ಕೇಂದ್ರದಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಿ ಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News