×
Ad

ಅರಣ್ಯಾಧಿಕಾರಿ ಸಂಧ್ಯಾರನ್ನು ಬೀದರಿಗೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

Update: 2022-02-03 10:45 IST

ಬೆಳ್ತಂಗಡಿ : ವಿವಾದಗಳಿಗೆ ಕಾರಣವಾಗಿದ್ದ ಮಂಗಳೂರಿನ ಅರಣ್ಯ ಸಂಚಾರಿ ದಳದ ವಲಯ ಅರಣ್ಯಾಧಿಕಾರಿ ಸಂಧ್ಯಾ ಅವರನ್ನು ಬೀದರಿಗೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸಂದ್ಯಾ ಅವರನ್ನು ಬೀದರಿನ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿಯವರಿಗೆ ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ : ಮರಗಳ್ಳರ ಮೇಲೆ ಕ್ರಮ ಕೈಗೊಂಡ ಅರಣ್ಯಾಧಿಕಾರಿ ಸಂಧ್ಯಾರ ವರ್ಗಾವಣೆಗೆ ತಡೆ ?

ಬೆಳ್ತಂಗಡಿಯಲ್ಲಿ ಮರಗಳ್ಳರ ಮೇಲೆ ಕ್ರಮ ಕೈಗೊಂಡ ಕಾರಣಕ್ಕೆ ವರ್ಗಾವಣೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಅವರನ್ನು ಬೀದರಿಗೆ ವರ್ಗಾವಣೆ ಮಾಡಿ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News