ದುಷ್ಕರ್ಮಿಗಳಿಂದ ತನ್ನ ಕಾರಿನ ಮೇಲೆ ಗುಂಡಿನ ದಾಳಿ: ಅಸದುದ್ದೀನ್ ಉವೈಸಿ ಆರೋಪ

Update: 2022-02-04 06:23 GMT
Photo credit: Twitter/@ANI

ಹೊಸದಿಲ್ಲಿ: ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ವಾಪಸಾಗುತ್ತಿದ್ದ ತಮ್ಮ ಕಾರಿನ ಮೇಲೆ ಗುಂಡು ಹಾರಿಸಲಾಗಿದೆ ಎಂದು ಎಐಎಂಐಎಂ(AIMIM) ನಾಯಕ ಅಸದುದ್ದೀನ್ ಉವೈಸಿ ಆರೋಪಿಸಿದ್ದಾರೆ. ಅದೃಷ್ಟವಶಾತ್‌, ಯಾರಿಗೂ ಗಾಯವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಾಥಮಿಕ ವರದಿ ಪ್ರಕಾರ ಓರ್ವ ಶೂಟರ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ndtv ವರದಿ ಮಾಡಿದೆ. 

ನಾವೆಲ್ಲರೂ ಸುರಕ್ಷಿತವಾಗಿದ್ದೇವೆ ಎಂದು ಉವೈಸಿ ಟ್ವೀಟ್‌ ನಲ್ಲಿ ಹೇಳಿದ್ದಾರೆ.  ದೆಹಲಿ ಸಮೀಪದ, ಪಶ್ಚಿಮ ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ.

ಶೂಟರ್‌ಗಳು ಶಸ್ತ್ರಾಸ್ತ್ರಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಉವೈಸಿ ತಿಳಿಸಿದ್ದಾರೆ.

"ಮೀರತ್‌ನ ಕಿಥೌರ್‌ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ನಾನು ದೆಹಲಿಗೆ ಹೊರಟಿದ್ದೆ. ಛಜರ್ಸಿ ಟೋಲ್ ಪ್ಲಾಜಾ ಬಳಿ ಇಬ್ಬರು ನನ್ನ ವಾಹನದ ಮೇಲೆ ಮೂರರಿಂದ ನಾಲ್ಕು ಸುತ್ತಿನ ಬುಲೆಟ್‌ಗಳನ್ನು ಹಾರಿಸಿದರು; ದಾಳಿ ಮಾಡಿದವರಲ್ಲಿ ಮೂರರಿಂದ ನಾಲ್ಕು ಮಂದಿಯಿದ್ದರು. ನನ್ನ ವಾಹನದ ಟೈರ್ ಪಂಕ್ಚರ್ ಆಗಿದೆ, ನಾನು ಇನ್ನೊಂದು ವಾಹನದಲ್ಲಿ ಸ್ಥಳದಿಂದ ಹೊರಟೆ" ಎಂದು ಉವೈಸಿ ಹೇಳಿದ್ದಾರೆ.

ಫೆಬ್ರವರಿ 10 ರಿಂದ ಪ್ರಾರಂಭವಾಗುವ ಉತ್ತರ ಪ್ರದೇಶ ಚುನಾವಣಾ ಪ್ರಚಾರದ ಭಾಗವಾಗಿ ಎಐಎಂಐಎಂ ನಾಯಕ ಮೀರತ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಅಲ್ಲಿಂದ ಮರಳುವಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣ ನಿರಾಕರಿಸಲಾಗುತ್ತಿದೆ ಎಂದ ಮೆಹಬೂಬಾ ಮುಫ್ತಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News