ಸಚಿವ ಸ್ಥಾನಕ್ಕಾಗಿ ಲಾಬಿ: ಮಹಾ‌ರಾಷ್ಟ್ರ ಮಾಜಿ ಸಿಎಂ ಫಡ್ನವೀಸ್ ಭೇಟಿಯಾದ ರಮೇಶ್ ಜಾರಕಿಹೊಳಿ

Update: 2022-02-03 18:29 GMT

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆಯ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಾಕಾಂಕ್ಷಿಗಳು ಪ್ರತ್ಯೇಕ ಸಭೆಗಳನ್ನು ನಡೆಸುತ್ತಿದ್ದು, ಇದೀಗ ಮಾಜಿ ಸಚಿವ, ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಮಹಾ‌ರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. 

ಸಚಿವ ಸಂಪುಟದಲ್ಲಿ ತಮಗೆ ಮತ್ತೆ ಸ್ಥಾನ ಕಲ್ಪಿಸುವಂತೆ ಹೈಕಮಾಂಡ್‌ಗೆ ಮನವೊಲಿಸುವ ಉದ್ದೇಶದಿಂದ ಫಡ್ನವೀಸ್ ಅವರನ್ನು ಬೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಸದ್ಯ ಗೋವಾ ಚುನಾವಣೆಯಲ್ಲಿ ಉಸ್ತುವಾರಿ ವಹಿಸಿಕೊಂಡಿರುವ ದೇವೇಂದ್ರ ಫಡ್ನವೀಸ್ ಅವರನ್ನು ಖಾಸಗಿ ಹೋಟೆಲ್ ಒಂದರಲ್ಲಿ ಭೇಟಿಯಾಗಿ ಸಚಿವ ಸಂಪುಟದಲ್ಲಿ ತಮಗೆ ಮತ್ತೆ ಸ್ಥಾನ ಕಲ್ಪಿಸುವಂತೆ ಪಕ್ಷದ ವರಿಷ್ಠರಿಗೆ ಶಿಫಾರಸ್ಸು ಮಾಡುವಂತೆ ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.  

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News