ಯು. ಗೋವಿಂದ ಮಾಸ್ಟರ್
Update: 2022-02-03 23:05 IST
ಕಾಪು : ದಂಡತೀರ್ಥ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಉಳಿಯಾ ರಗೋಳಿ ಗೋವಿಂದ ಮಾಸ್ಟರ್ (92) ಅವರು ಗುರುವಾರ ಸ್ವಗೃಹದಲ್ಲಿ ನಿಧನ ಹೊಂದಿದರು.
1954ರಲ್ಲಿ ದಂಡತೀರ್ಥ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಧ್ಯಾಪಕರಾಗಿ ಸೇವಾರಂಭಿಸಿದ್ದು, 1988ರಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವಾ ನಿವೃತ್ತಿ ಹೊಂದಿದ್ದರು. ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಸ್ಥಾಪಕರಲ್ಲಿ ಓರ್ವರಾಗಿದ್ದ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಮೊಕ್ತೇಸರರಾಗಿಯೂ ಸೇವೆ ಸಲ್ಲಿಸಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಕೃಷಿಕ ಬಂಧು ಪ್ರಶಸ್ತಿಗೂ ಭಾಜನರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.