×
Ad

ಶಿವಮೊಗ್ಗ: ಹಾವು ತಪ್ಪಿಸಲು ಹೋಗಿ ತುಂಗಾ ನಾಲೆಗೆ ಬಿದ್ದ ಕಾರು; ಮಹಿಳೆ ಮೃತ್ಯು

Update: 2022-02-03 23:57 IST

ಶಿವಮೊಗ್ಗ, ಫೆ.3:  ಗಾಜನೂರು ಬಳಿ ದಾರಿಗೆ ಅಡ್ಡಬಂದ ಹಾವನ್ನು ತಪ್ಪಿಸಲು ಹೋಗಿ ಕಾರೊಂದು ತುಂಗಾ ಎಡದಂಡೆ ನಾಲೆಗೆ ಉರುಳಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, ಪತಿ ಬದುಕುಳಿದಿದ್ದಾರೆ.

ಗುರುವಾರ ಬೆಳಗ್ಗಿನ ಜಾವ 3 ಗಂಟೆಗೆ ಘಟನೆ ನಡೆದಿದ್ದು, ನೀರಿನಲ್ಲಿ ಮುಳುಗಿ ಸುಷ್ಮಾ( 28) ಸಾವನ್ನಪ್ಪಿದ್ದು, ಪತಿ ಚೇತನ್ ಕುಮಾರ್ ಪಾರಾಗಿದ್ದಾರೆ.

ಚೇತನ್ ತಾಯಿಯ ಆನಾರೋಗ್ಯದ ವಿಚಾರ ತಿಳಿದು ತಡರಾತ್ರಿಯೇ ದಂಪತಿಗಳು ಶಿವಮೊಗ್ಗದಿಂದ ತುಮಕೂರಿಗೆ ಹೊರಟಿದ್ದರು ಎಂದು ತಿಳಿದು ಬಂದಿದೆ.

ನಾಲೆಯ ಪಕ್ಕದ ರಸ್ತೆಯಲ್ಲಿ ತೆರಳುವ ವೇಳೆಗೆ ಕಾರಿಗೆ ಹಾವು ಅಡ್ಡಬಂದಿದ್ದು , ಈ ವೇಳೆ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಕಾರು ನಾಲೆಗೆ ಉರುಳಿದೆ ಎನ್ನಲಾಗಿದೆ.

ಈ ವೇಳೆ ಚೇತನ್ ಕುಮಾರ್ ಸಹಾಯಕ್ಕಾಗಿ ಕೂಗಿ ಕೊಂಡಿದ್ದು, ಧ್ವನಿ ಕೇಳಿದರೂ, ಭಯದಿಂದ ಮನೆಯಿಂದ ಜನರು ಹೊರಗೆ ಬರದೇ ಶಬ್ಧದ ಬಗ್ಗೆ ಪೊಲೀಸರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಸ್ಥಳೀಯರು ಚೇತನ್ ಅವರನ್ನು ರಕ್ಷಣೆ ಮಾಡಿದ್ದು, ಕಾರಿನೊಳಗೆ ನೀರು ತುಂಬಿದ್ದರಿಂದ ಸುಷ್ಮಾ ಅವರು ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News