ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಸೋದರಳಿಯನನ್ನು ಬಂಧಿಸಿದ ಇಡಿ

Update: 2022-02-04 05:29 GMT

ಹೊಸದಿಲ್ಲಿ: ಅಕ್ರಮ ಮರಳು ದಂಧೆ ಪ್ರಕರಣದಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪೇಂದ್ರ ಸಿಂಗ್ ಹನಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ತನಿಖಾ ಸಂಸ್ಥೆ ಹನಿಯನ್ನು ನಿನ್ನೆ ಸಂಜೆ ಕಸ್ಟಡಿಗೆ ತೆಗೆದುಕೊಂಡಿದ್ದು, ಇಂದು ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ ಎಂದು NDTV ವರದಿ ಮಾಡಿದೆ.

ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ನಿಬಂಧನೆಗಳ ಅಡಿಯಲ್ಲಿ ಹನಿಯವರನ್ನು ತಡರಾತ್ರಿಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.

117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಮತದಾನಕ್ಕೆ ಕೆಲವೇ ದಿನಗಳಿರುವಾಗ ಈ ಬಂಧನ ನಡೆದಿದೆ. ಫೆಬ್ರವರಿ 20 ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ.

ಕಳೆದ ತಿಂಗಳು ಹನಿಗೆ ಸೇರಿದ ಜಾಗದಲ್ಲಿ ಇಡಿ ದಾಳಿ ನಡೆಸಿ ರೂ. 8 ಕೋಟಿ ವಶಪಡಿಸಿಕೊಂಡಿತ್ತು. ಪಂಜಾಬ್‌ನಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News