ಫೆ.7ಕ್ಕೆ ಓಬವ್ವ ಆತ್ಮರಕ್ಷಣೆ ಕಲೆ ಉದ್ಘಾಟನೆ
Update: 2022-02-04 21:24 IST
ಉಡುಪಿ, ಫೆ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಓಬವ್ವ ಆತ್ಮರಕ್ಷಣೆ ಕಲೆ- ಕರಾಟೆ ಉದ್ಘಾಟನಾ ಕಾರ್ಯಕ್ರಮ ಫೆ.7ರಂದು ಬೆಳಗ್ಗೆ 10:30ಕ್ಕೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.