×
Ad

"ನಾವು ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ": ಹಿಜಾಬ್ ವಿವಾದದ ಕುರಿತು ರಾಹುಲ್ ಗಾಂಧಿ ಟ್ವೀಟ್

Update: 2022-02-05 12:21 IST

ಹೊಸದಿಲ್ಲಿ: ಕರ್ನಾಟಕ ಕಾಲೇಜಿನಲ್ಲಿ ತರಗತಿ ಕೊಠಡಿಗಳಲ್ಲಿ ಹಿಜಾಬ್ ಧರಿಸಲು ಮುಸ್ಲಿಂ ವಿದ್ಯಾರ್ಥಿನಿಯ ಬೇಡಿಕೆಯ ವಿಚಾರ ಹಾಗೂ ಈ ವಿಚಾರದಲ್ಲಿ ಹಿಂದುತ್ವ ಸಂಘಟನೆಗಳ ಕೈವಾಡದ ಬಳಿಕ ಉಂಟಾದ ವಿವಾದದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಟ್ವೀಟ್ ಮಾಡಿದ್ದಾರೆ.

ಸರಸ್ವತಿ ಪೂಜೆಯ ಸಂದರ್ಭದಲ್ಲಿ ತಮ್ಮ ಟ್ವೀಟ್‌ ನಲ್ಲಿ ಹಿಜಾಬ್‌ ವಿಚಾರವನ್ನು ಉಲ್ಲೇಖಿಸಿದ ಅವರು, ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ಅನುಮತಿಸದ ಕಾಲೇಜು ಅಧಿಕಾರಿಗಳ ನಿರ್ಧಾರವನ್ನು ಖಂಡಿಸಿದರು. "ನಾವು ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ" ಎಂದು ಟ್ವೀಟ್ ಮಾಡಿದ್ದಾರೆ.

"ವಿದ್ಯಾರ್ಥಿಗಳ ಹಿಜಾಬ್ ಅವರ ಶಿಕ್ಷಣದ ಹಾದಿಯಲ್ಲಿ ಬರಲು ಬಿಡುವ ಮೂಲಕ  ನಾವು ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ. ಮಾ ಸರಸ್ವತಿ ಎಲ್ಲರಿಗೂ ಜ್ಞಾನವನ್ನು ನೀಡುತ್ತಾರೆ. ಅವರು ಬೇಧಭಾವ ಮಾಡುವುದಿಲ್ಲ" ಎಂದು ಅವರು ತಮ್ಮ ಟ್ವೀಟ್‌ ನಲ್ಲಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News