ಬಿಜೆಪಿ, ಆರೆಸ್ಸೆಸ್‌ ನಿಂದ ಹಿಜಾಬ್ ಹೆಸರಿನಲ್ಲಿ ರಾಜ್ಯಾದ್ಯಂತ ಕೋಮು ಸಂಘರ್ಷ ಸೃಷ್ಟಿಸಲು ಯತ್ನ: ಸಿದ್ದರಾಮಯ್ಯ ಆರೋಪ

Update: 2022-02-05 08:52 GMT

ಬೆಂಗಳೂರು, ಫೆ.5: ಹಿಜಾಬ್ ಹೆಸರಿನಲ್ಲಿ ರಾಜ್ಯಾದ್ಯಂತ ಕೋಮು ಸಂಘರ್ಷ ಸೃಷ್ಟಿಸಲು ಬಿಜೆಪಿ ಮತ್ತು ಆರೆಸ್ಸೆಸ್‌ ಪ್ರಯತ್ನಿಸುತ್ತಿವೆ. ಇದಕ್ಕೆ ತಕ್ಷಣ ಕಡಿವಾಣ ಹಾಕಿ ಜನರನ್ನು ಪ್ರಚೋದಿಸುವ ವ್ಯಕ್ತಿಗಳನ್ನು ಬಂಧಿಸುವಂತೆ ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಕಾಂಗ್ರೆಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಹಿಜಾಬ್ ಹೆಸರಿನಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸುವುದು ಸಂಘ ಪರಿವಾರದ ಮುಖ್ಯ ಅಜೆಂಡಾ. ಪ್ರಧಾನಿ ಮೋದಿ ಬೇಟಿ ಬಚಾವೋ, ಬೇಟಿ ಪಡಾವೋ ಬಗ್ಗೆ ಮಾತನಾಡುತ್ತಾರೆ. ಅವರಿಗೆ ಈ ಘಟನೆಯ ಬಗ್ಗೆ ಅರಿವಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಯಾವುದೇ ಧರ್ಮವನ್ನು ಆಚರಿಸುವ ಹಕ್ಕನ್ನು ಸಂವಿಧಾನವು ನೀಡಿದೆ. ಅಂದರೆ ಅವರವರ ಧರ್ಮದ ಪ್ರಕಾರ ಜನರು ಯಾವುದೇ ಬಟ್ಟೆಯನ್ನು ಧರಿಸಬಹುದು. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರ ಶಾಲೆ ಪ್ರವೇಶವನ್ನು ನಿಷೇಧಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News